Karnataka Water Resources Department Recruitment 2023: ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅದರಂತೆ ಒಟ್ಟು 400 ಅಸಿಸ್ಟೆಂಟ್ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳ ಭರ್ತಿಗೆ ಇಲಾಖೆಯು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಸಿಸ್ಟೆಂಟ್ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಶೀಘ್ರದಲ್ಲೇ ಪ್ರಕಟಿಸಲಿದೆ.