KSDA Recruitment 2023: ಕರ್ನಾಟಕ ರಾಜ್ಯ ಕೃಷಿ ಇಲಾಖೆ(Karnataka State Department of Agriculture) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8 ಅಸಿಸ್ಟೆಂಟ್ ಟೆಕ್ನಿಕಲ್ ಮ್ಯಾನೇಜರ್, ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಇದೇ ಮಾರ್ಚ್ 6, 2023, ಅಂದರೆ ಇಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಕಸ್ತರು ಆಫ್ಲೈನ್/ಪೋಸ್ಟ್ ಮುಖಾಂತರ ಅರ್ಜಿ ಹಾಕಬೇಕು.
ಅಭ್ಯರ್ಥಿಗಳ ವಯಸ್ಸು ಎಷ್ಟಿರಬೇಕೆಂದು ಕೃಷಿ ಇಲಾಖೆ ತಿಳಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆತ್ಮ ಯೋಜನೆಯಡಿ ನೇರಗುತ್ತಿಗೆ ಆಧಾರದ ಮೇರೆಗೆ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಡ್ಯದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.