KSFC Recruitment 2023: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (Karnataka State Financial Corporation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 41 ಡೆಪ್ಯುಟಿ ಮ್ಯಾನೇಜರ್(ಟೆಕ್ನಿಕಲ್), ಡೆಪ್ಯುಟಿ ಮ್ಯಾನೇಜರ್ (ಲೀಗಲ್) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಕೆಲಸ ಬೇಕು ಎಂದು ಹಂಬಲಿಸುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಇದೇ ಮಾರ್ಚ್ 18, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.