KSP Recruitment 2023: ಕರ್ನಾಟಕ ರಾಜ್ಯ ಪೊಲೀಸ್(Karnataka State Police) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪೊಲೀಸ್ ಪಡೆ ಮತ್ತು ಸದಸ್ಯರು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಸಮಿತಿಯು ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ(Recruitment) ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 25 ತಾಂತ್ರಿಕ ಸಿಬ್ಬಂದಿಗಳನ್ನು(Technical Staff) ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಹತೆಗಳು ಏನಿರಬೇಕು?
ನೇವಿ/ಕೋಸ್ಟ್ಗಾರ್ಡ್/ಬಿಎಸ್ಎಫ್ (ವಾಟರ್ ವಿಂಗ್) ನಿಂದ ನಿವೃತ್ತಗೊಂಡ ಅಧಿಕಾರಿಗಳು ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸಂಬಂಧಿಸಿದ ವಯೋಮಿತಿ, ವಿದ್ಯಾರ್ಹತೆ, ಅನುಭವ ಮತ್ತು ಷರತ್ತು ಹಾಗೂ ನಿಬಂಧನೆಗಳನ್ನು ಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪೊಲೀಸ್ ಪಡೆ ಇವರಿಂದ ಕಚೇರಿ ವೇಳೆಯಲ್ಲಿ ಅಥವಾ ಅಧಿಕೃತ ವೆಬ್ಸೈಟ್ ksp.gov.in ಗೆ ಭೇಟಿ ನೀಡಿ ಪಡೆದುಕೊಳ್ಳಬಹುದು.