NWKRTC Recruitment 2023: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ(North Western Karnataka Road Transport Corporation ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 71 ಅಪ್ರೆಂಟಿಸ್ (Apprentice) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್ 18, 2023 ರಂದು ಸಂದರ್ಶನ (Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಳಗಾವಿಯಲ್ಲಿ (Belagavi) ಪೋಸ್ಟಿಂಗ್ ನೀಡಲಾಗುತ್ತದೆ.