ರಾಜ್ಯದ ನಿರುದ್ಯೋಗಿಗಳಿಗೆ(Unemployed) ಇಲ್ಲೊಂದು ಸಿಹಿ ಸುದ್ದಿ ಇದೆ. ಟೀಚಿಂಗ್ ಪೋಸ್ಟ್ಗಳನ್ನು(Teaching Posts) ಹುಡುಕುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಒಂದು ಗುಡ್ ನ್ಯೂಸ್ ನೀಡಿದೆ. ಅರ್ಹರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರವು(Karnataka State Government) ವಿವಿಧ ಉದ್ಯೋಗ ಅಧಿಸೂಚನೆಗಳನ್ನು ಬಿಡುಗಡೆ ಮಾಡುತ್ತಿದೆ. ಶೀಘ್ರದಲ್ಲೇ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಿದೆ. ಇದು ಕರ್ನಾಟಕ ರಾಜ್ಯ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ಎಲ್ಲಾ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವಾಗಿದೆ.
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2023 ನೇ ಸಾಲಿನ ಕರ್ನಾಟಕ PGT ಮತ್ತು TGT ಶಿಕ್ಷಕರ ನೇಮಕಾತಿಯ ಹುದ್ದೆಗಳಿಗೆ ಆನ್ಲೈನ್ ಅಧಿಸೂಚನೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಭಾರತದ ಸಂವಿಧಾನದ ಅಂಗವಾಗಿರುವ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಅಧಿಸೂಚನೆಯನ್ನು ಬಿಡುಗಡೆ ಮಾಡಲಿದೆ. ಆ ಪ್ರಕಾರ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.