KVAFSU Recruitment 2023: ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು(Karnataka Veterinary Animal and Fisheries Sciences University) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 25 ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳು ಖಾಲಿ ಇವೆ. ಮಾರ್ಚ್ 26, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಹಾಕಿ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.