ನಿರುದ್ಯೋಗಿಗಳಿಗೆ ಇಲ್ಲೊಂದು ಗುಡ್ ನ್ಯೂಸ್ ಇದೆ. ಶಿಕ್ಷಕರಾಗಬೇಕೆಂದು ಕನಸು ಕಾಣುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಶೀಘ್ರದಲ್ಲೇ ಒಂದೂವರೆ ಲಕ್ಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಕೆಲಸ ಅರಸುತ್ತಿರುವ ಅಭ್ಯರ್ಥಿಗಳು ಈ ನೇಮಕಾತಿ ಪ್ರಕ್ರಿಯೆ ಆರಂಭವಾದ ಕೂಡಲೇ ಅರ್ಜಿ ಹಾಕಿ. ಲಕ್ಷಾಂತರ ನಿರುದ್ಯೋಗಿ ಯುವಕ/ ಯುವತಿಯರಿಗೆ ಅದೃಷ್ಟದ ಬಾಗಿಲು ತೆಗೆಯಲಿದೆ.
ರಾಜ್ಯದಲ್ಲಿ ಸುಮಾರು 9,350 ಉನ್ನತೀಕರಿಸಿದ ಹೈಯರ್ ಸೆಕೆಂಡರಿ ಶಾಲೆಗಳು ಶಿಕ್ಷಕರ ಕೊರತೆಯನ್ನು ಎದುರಿಸುತ್ತಿವೆ. “ಹೊಸ ನಿಯಮದ ಪ್ರಕಾರ, ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಳನ್ನು ನಡೆಸಲಾಗುವುದಿಲ್ಲ. ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿರುವ ಶಿಕ್ಷಕರು ಈಗ ಆಯೋಗ ನಡೆಸುವ ಪ್ರವೇಶ ಪರೀಕ್ಷೆಗಳಲ್ಲಿ ತೇರ್ಗಡೆಯಾದ ನಂತರ ಸಾಮಾನ್ಯ ಸರ್ಕಾರಿ ಶಿಕ್ಷಕರಾಗಬಹುದು ಎಂದು ಅವರು ಹೇಳಿದರು.