ನಿಮ್ಮ ಹೃದಯವನ್ನು ಆರೋಗ್ಯಕರವಾಗಿಡಿ: ತೆಂಗಿನ ಹಾಲಿನಲ್ಲಿ ಆಂಟಿಆಕ್ಸಿಡೆಂಟ್ ಲಾರಿಕ್ ಆಮ್ಲವಿದೆ. ಇದು ಹೃದ್ರೋಗ ಮತ್ತು ಪಾರ್ಶ್ವವಾಯು ವಿರುದ್ಧ ರಕ್ಷಿಸಲು ಸಹಾಯ ಮಾಡುತ್ತದೆ. ತೆಂಗಿನ ಹಾಲನ್ನು ಹೆಚ್ಚಿನ ಪ್ರೋಟೀನ್ ಆಹಾರದೊಂದಿಗೆ ಸೇವಿಸಿದರೆ, ಕೊಲೆಸ್ಟ್ರಾಲ್ ಮಟ್ಟವನ್ನು ನಿರ್ವಹಿಸುವಲ್ಲಿ ಇದು ಹೆಚ್ಚಿನ ಪ್ರಮಾಣದಲ್ಲಿ ಸಹಾಯ ಮಾಡುತ್ತದೆ. ಆದರೆ, ಇದು ತೆಂಗಿನ ಎಣ್ಣೆಯಂತಹ ಸ್ಯಾಚುರೇಟೆಡ್ ಕೊಬ್ಬನ್ನು ಸಹ ಹೊಂದಿದೆ. ಆದ್ದರಿಂದ ಅತಿಯಾಗಿ ಸೇವನೆ ಕೂಡ ಮಾಡಬಾರದು. ಇದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಬಹುದು.
ರೋಗನಿರೋಧಕ ಶಕ್ತಿ ಹೆಚ್ಚಿಸುತ್ತೆ: ತೆಂಗಿನ ಹಾಲಿನಲ್ಲಿರುವ ವಿಟಮಿನ್ ಮತ್ತು ಖನಿಜಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಏಕೆಂದರೆ, ಇದು ಲಾರಿಕ್ ಆಮ್ಲವನ್ನು ಹೊಂದಿರುತ್ತದೆ, ಇದು ದೇಹಕ್ಕೆ ಹೋಗುತ್ತದೆ ಮತ್ತು ಮೊನೊಲೌರಿನ್ ಸಂಯುಕ್ತವಾಗಿ ಪರಿವರ್ತನೆಗೊಳ್ಳುತ್ತದೆ. ಇದು ಆಂಟಿಬ್ಯಾಕ್ಟೀರಿಯಲ್, ಆಂಟಿವೈರಲ್, ಆಂಟಿಫಂಗಲ್ ಗುಣಲಕ್ಷಣಗಳನ್ನು ಹೊಂದಿದೆ, ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ಮೂಲಕ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
ತ್ವಚೆಯನ್ನು ಆರೋಗ್ಯವಾಗಿರಿಸುತ್ತೆ: ನೀವು ತೆಂಗಿನ ಹಾಲನ್ನು ಆಹಾರದಲ್ಲಿ ಸೀಮಿತ ಪ್ರಮಾಣದಲ್ಲಿ ಬಳಸಿದರೆ ಅಥವಾ ಕುಡಿಯುತ್ತಿದ್ದರೆ ಚರ್ಮವು ಆರೋಗ್ಯಕರವಾಗಿರುತ್ತದೆ. ತೆಂಗಿನ ಹಾಲು ಆರ್ಧ್ರಕ ಗುಣಗಳನ್ನು ಹೊಂದಿದೆ. ಇದು ಚರ್ಮದ ತೇವಾಂಶವನ್ನು ಉಳಿಸಿಕೊಳ್ಳುತ್ತದೆ. ಅಲ್ಲದೇ, ಇದನ್ನು ಮುಖಕ್ಕೆ ಹಚ್ಚುವುದರಿಂದ ಚರ್ಮವು ನಯವಾಗಿ, ಮೃದುವಾಗಿ, ಹೊಳೆಯುತ್ತದೆ. ಅನೇಕ ತ್ವಚೆಯ ಸಮಸ್ಯೆಗಳನ್ನು ಸಹ ನಿವಾರಿಸಬಹುದು. ಚರ್ಮವು ಶುಷ್ಕ, ನಿರ್ಜೀವವಾಗಿ ಕಾಣುವುದಿಲ್ಲ.
ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತೆ: ತೆಂಗಿನ ಹಾಲಿನಲ್ಲಿ ಹೆಚ್ಚಿನ ಪ್ರಮಾಣದ ಫೈಬರ್ ಇದ್ದು, ಇದು ಮಲಬದ್ಧತೆಯ ಸಮಸ್ಯೆಯನ್ನು ತಡೆಯುತ್ತದೆ. ಕರುಳಿನ ಚಲನೆಯನ್ನು ಉತ್ತೇಜಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯನ್ನು ಸದೃಢಗೊಳಿಸುತ್ತದೆ. ಮೇಲೆ ತಿಳಿಸಿರುವಂತೆ, ತೆಂಗಿನ ಹಾಲಿನಲ್ಲಿರುವ MCT ಗಳ ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳು ಕರುಳಿನಲ್ಲಿರುವ ಹಾನಿಕಾರಕ ಬ್ಯಾಕ್ಟೀರಿಯಾವನ್ನು ಕೊಲ್ಲಲು ಮತ್ತು ಪ್ರಯೋಜನಕಾರಿ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ನೀವು ಕರಿ ಭಕ್ಷ್ಯಗಳು, ಸ್ಮೂಥಿಗಳು, ಮೊಸರಿಗೆ ತೆಂಗಿನ ಹಾಲನ್ನು ಬಳಸಬಹುದು.