ಡ್ರ್ಯಾಗನ್ ಹಣ್ಣು ಥೈಲ್ಯಾಂಡ್ ಮತ್ತು ವಿಯೆಟ್ನಾಂನಲ್ಲಿ ಅತ್ಯಂತ ಜನಪ್ರಿಯ ಹಣ್ಣುಗಳಲ್ಲಿ ಒಂದಾಗಿದೆ. ಇದೀಗ ಈ ಹಣ್ಣು ಭಾರತದಲ್ಲೂ ಜನಪ್ರಿಯವಾಗಿದೆ. ಇದು ವಿವಿಧ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಮಧುಮೇಹದಿಂದ ಹಿಡಿದು ಕ್ಯಾನ್ಸರ್ವರೆಗೆ ಹಲವು ರೋಗಗಳನ್ನು ನಿಯಂತ್ರಿಸುವ ಅಂಶಗಳನ್ನು ಒಳಗೊಂಡಿದೆ ಎಂದು ಹೇಳಲಾಗುತ್ತದೆ. ಇದರಲ್ಲಿರುವ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.
ಡ್ರ್ಯಾಗನ್ ಹಣ್ಣು ನೈಸರ್ಗಿಕ ಉತ್ಕರ್ಷಣ ನಿರೋಧಕ ಪರಿಣಾಮಗಳನ್ನು ಹೊಂದಿದೆ ಮತ್ತು ಫ್ಲೇವನಾಯ್ಡ್ಗಳು, ಫೀನಾಲಿಕ್ ಆಮ್ಲಗಳು, ಆಸ್ಕೋರ್ಬಿಕ್ ಆಮ್ಲ ಮತ್ತು ಫೈಬರ್ ಅನ್ನು ಹೊಂದಿರುತ್ತದೆ. ಇವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಮಧುಮೇಹ ಇಲ್ಲದ ಜನರು ಡ್ರ್ಯಾಗನ್ ಹಣ್ಣುಗಳನ್ನು ಸೇವಿಸುವುದರಿಂದ ಮಧುಮೇಹದ ಅಪಾಯವನ್ನು ಕಡಿಮೆ ಮಾಡಬಹುದು.