ಇತ್ತೀಚೆಗೆ, ಸ್ಪೇನ್ನ ಬಾರ್ಸಿಲೋನಾ ವಿಶ್ವವಿದ್ಯಾಲಯದ ಸಂಶೋಧಕರು ತೂಕ ಇಳಿಕೆ ಮತ್ತು ನಿಂಬೆ ರಸದ ನಡುವಿನ ಸಂಬಂಧವನ್ನು ಕಂಡುಹಿಡಿಯಲು ಪ್ರಯತ್ನಿಸಿದರು. ಈ ಅಧ್ಯಯನದ ಪ್ರಕಾರ ನಿಂಬೆ ಸಿಟ್ರಿಕ್ ಆಮ್ಲದಲ್ಲಿ ಸಮೃದ್ಧವಾಗಿದೆ. ಇದು ಯಕೃತ್ತಿನ ಸಮಸ್ಯೆಗಳನ್ನು ಗುಣಪಡಿಸುತ್ತದೆ ಎಂದು ಸಾಬೀತಾಗಿದೆ. ಅಲ್ಲದೆ ನಿಂಬೆ ನಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಆಶ್ಚರ್ಯಕರವಾಗಿ ಕಡಿಮೆ ಮಾಡುತ್ತದೆ ಎಂದು ಈ ಅಧ್ಯಯನವು ಕಂಡುಹಿಡಿದಿದೆ.