ರಕ್ತದೊತ್ತಡವು ಸಂಪೂರ್ಣವಾಗಿ ಸಾಮಾನ್ಯವಾದಾಗ ಸಿಸ್ಟೊಲಿಕ್ ರಕ್ತದೊತ್ತಡವನ್ನು ಅಳೆಯಲಾಗುತ್ತದೆ. ನಿಮ್ಮ ಅಪಧಮನಿಗಳಲ್ಲಿನ ಒತ್ತಡವನ್ನು ಹೃದಯ ಬಡಿತದ ಸಮಯದಲ್ಲಿ ಅಳೆಯಲಾಗುತ್ತದೆ. ಅಧಿಕ ರಕ್ತದೊತ್ತಡವು ಅಪಧಮನಿಗಳನ್ನು ಹಾನಿಗೊಳಿಸುತ್ತದೆ. ಅಲ್ಲದೇ ಹೃದಯಾಘಾತ ಮತ್ತು ಪಾರ್ಶ್ವವಾಯು ಹೀಗೆ ಗಂಭೀರ ಸಮಸ್ಯೆಗಳು ಎದುರಾಗಬಹುದು. ಇದರಿಂದ ದೇಹಕ್ಕೆ ಕೂಡ ಹಾನಿ ಉಂಟಾಗುತ್ತದೆ.
ನಿಯಮಿತ ವ್ಯಾಯಾಮ, ಸಮತೋಲಿತ ಆಹಾರ ಮತ್ತು ಆರೋಗ್ಯಕರ ಜೀವನಶೈಲಿ ಒತ್ತಡವನ್ನು ನಿಯಂತ್ರಿಸಲು ಮತ್ತು ಅಧಿಕ ರಕ್ತದೊತ್ತಡವನ್ನು ತಡೆಯಲು ಸಹಾಯ ಮಾಡುತ್ತದೆ. ಮೊಬೈಲ್ ನಲ್ಲಿ ಅತಿಯಾಗಿ ಮಾತನಾಡುವುದರಿಂದ ರಕ್ತದೊತ್ತಡ ಸಮಸ್ಯೆ ಹೆಚ್ಚುತ್ತದೆ. ವಾರದಲ್ಲಿ 30 ನಿಮಿಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಮೊಬೈಲ್ ಫೋನ್ನಲ್ಲಿ ಮಾತನಾಡುವುದು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗಬಹುದು ಎಂದು ಅಧ್ಯಯನವೊಂದು ತಿಳಿಸಿದೆ.
ಪಾರ್ಟಿ ಫುಡ್ ಮತ್ತು ಆಲ್ಕೋಹಾಲ್ ಅಧಿಕ ರಕ್ತದೊತ್ತಡಕ್ಕೆ ಕಾರಣವಾಗಬಹುದು. ಕರಿದ, ಜಂಕ್ ಫುಡ್ ರಕ್ತದೊತ್ತಡದ ಸಮಸ್ಯೆಯನ್ನು ಹೆಚ್ಚಿಸುತ್ತದೆ. ಆಲ್ಕೋಹಾಲ್ ಕೂಡ ಅಧಿಕ ರಕ್ತದೊತ್ತಡವನ್ನು ಉಂಟುಮಾಡುತ್ತದೆ. ಮದ್ಯಪಾನ ಮಾಡುವುದನ್ನು ನಿಲ್ಲಿಸಿ. ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸಿ. (Disclaimer: ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. news18ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ನ್ಯೂಸ್ 18 ಇದಕ್ಕೆ ಜವಾಬ್ದಾರಿಯಲ್ಲ)