ನಿರಂತವಾಗಿ ಕೆಲಸ ಮಾಡುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ನಮ್ಮ ಲೈಫ್ಸ್ಟೈಲ್ ಮೇಲೆ ಪರಿಣಾಮ ಬೀಡುತ್ತದೆ. ಕೆಲಸ ಮಾಡುತ್ತಾ ದೀರ್ಘಕಾಲ ಕುಳಿತುಕೊಂಡಿದ್ದರೆ. ನಮ್ಮ ತಲೆ, ಕುತ್ತಿಗೆ ಮತ್ತು ಭುಜಗಳಲ್ಲಿ ನೋವು ಮತ್ತು ಅಸ್ವಸ್ಥತೆ ಅನುಭವಿಸುತ್ತೇವೆ. ಅಷ್ಟೇ ಅಲ್ಲದೇ ದೈಹಿಕ ಚಟುವಟಿಕೆಯ ಕೊರತೆ ಮತ್ತು ಒತ್ತಡದ ಕೆಲಸ ತಲೆನೋವು, ಮೈಗ್ರೇನ್, ಕುತ್ತಿಗೆ ನೋವು ಮತ್ತು ಇತರ ದೈಹಿಕ ಅಥವಾ ಮಾನಸಿಕ ಸಮಸ್ಯೆಗಳನ್ನು ಉಂಟುಮಾಡಬಹುದು. ಆದರೆ ಆಗಾಗ ತಲೆಗೆ ಮಸಾಜ್ ಮಾಡಿಸಿಕೊಳ್ಳುವುದರಿಂದ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಸುಧಾರಣೆಯಾಗುತ್ತದೆ. ಒತ್ತಡ ಮತ್ತು ಆತಂಕವನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.