ಬಾಳೆಹಣ್ಣು ಪೊಟ್ಯಾಸಿಯಮ್ನಲ್ಲಿ ಸಮೃದ್ಧವಾಗಿದೆ. ಇದರಲ್ಲಿ ವಿಟಮಿನ್ ಸಿ ಕೂಡ ಸಮೃದ್ಧವಾಗಿದೆ. ಈ ಪೋಷಕಾಂಶಗಳು ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತವೆ. ಹಸಿವನ್ನು ನಿಯಂತ್ರಿಸುತ್ತದೆ. ಬಾಳೆಹಣ್ಣಿನಲ್ಲಿರುವ ಹೆಚ್ಚಿನ ನಾರಿನಂಶವು ದೀರ್ಘಕಾಲದವರೆಗೆ ಹಸಿವಾಗದಂತೆ ಹೊಟ್ಟೆಯನ್ನು ತುಂಬಿಸುತ್ತದೆ. ಇದರಿಂದ ಅಧಿಕ ತೂಕವನ್ನು ಕಡಿಮೆ ಮಾಡಬಹುದು. ಅಲ್ಲದೆ, ಬಾಳೆಹಣ್ಣಿನಲ್ಲಿ ಇರುವ ಪೊಟ್ಯಾಸಿಯಮ್ನಿಂದ ಅಧಿಕ ರಕ್ತದೊತ್ತಡ ಕಡಿಮೆಯಾಗುತ್ತದೆ.