ಇನ್ನು ಮಹಾರಾಷ್ಟ್ರ, ಕರ್ನಾಟಕ ಮತ್ತು ಗುಜರಾತ್ ರಾಜ್ಯಗಳಲ್ಲಿ ಕೋವಿಡ್ ಪಾಸಿಟಿವಿಟಿ ದರದಲ್ಲಿ ಏರಿಕೆಯಾದ ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಎರಡು ಸಾವು, ಒಂದೇ ದಿನದಲ್ಲಿ 155 ಹೊಸ ಪ್ರಕರಣಗಳು, ಬುಧವಾರ ತೆಲಂಗಾಣದಲ್ಲಿ 100 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ರಾಜಸ್ಥಾನ, ಮಧ್ಯಪ್ರದೇಶ, ತಮಿಳುನಾಡು, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲೂ ಪ್ರಕರಣ ಏರಿಕೆಯಾಗಿದೆ.