ಅಲೋವೆರಾ ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಫಂಗಲ್ ಗುಣಗಳನ್ನು ಹೊಂದಿದೆ. ಇವು ಪರಿಣಾಮಕಾರಿಯಾಗಿ ತಲೆಹೊಟ್ಟು ಹೋಗಲಾಡಿಸುತ್ತದೆ. ಅಲೋವೆರಾ ಜೆಲ್ ಅನ್ನು ತಲೆಗೆ ಹಚ್ಚಿ ನಲವತ್ತು ನಿಮಿಷಗಳ ನಂತರ ತೊಳೆದರೆ ತಲೆಹೊಟ್ಟು ದೂರವಾಗುತ್ತದೆ. ಮೆಂತ್ಯೆಯನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಪೇಸ್ಟ್ ರೀತಿಯಲ್ಲಿ ತಲೆಗೆ ಹಚ್ಚಬೇಕು. ಅರ್ಧ ಗಂಟೆ ಬಿಟ್ಟು ನಂತರ ಉಗುರುಬೆಚ್ಚನೆಯ ನೀರಿನಿಂದ ತೊಳೆಯಿರಿ. ವಾರಕ್ಕೊಮ್ಮೆ ಇದನ್ನು ಮಾಡಿ.