ಬಿಸಿ ನೀರಿನಿಂದ ಸ್ನಾನ ಮಾಡುವುದರಿಂದ ಚರ್ಮದ ತೇವಾಂಶ ಕಡಿಮೆಯಾಗುತ್ತದೆ. ಪರಿಣಾಮವಾಗಿ, ಚರ್ಮವು ಒರಟಾಗುವ ಸಾಧ್ಯತೆಗಳು ಹೆಚ್ಚಾಗುತ್ತವೆ. ಇದರಿಂದ ಚರ್ಮದ ಸೌಂದರ್ಯ ಕ್ರಮೇಣ ಕಡಿಮೆಯಾಗುತ್ತದೆ. ಹಾಗಾಗಿ ಅಗತ್ಯವಿಲ್ಲದಿದ್ದಲ್ಲಿ ಬಿಸಿನೀರಿನಲ್ಲಿ ಸ್ನಾನ ಮಾಡುವುದನ್ನು ನಿಲ್ಲಿಸಿ ಮತ್ತು ಉಗುರುಬೆಚ್ಚನೆಯ ನೀರಿನಲ್ಲಿ ಸ್ನಾನ ಮಾಡಲು ತಜ್ಞರು ಶಿಫಾರಸ್ಸು ಮಾಡುತ್ತಾರೆ.