ಕೊಲೆಸ್ಟ್ರಾಲ್ ನಮ್ಮ ದೇಹದಲ್ಲಿ ಅತ್ಯಗತ್ಯ ಅಂಶವಾಗಿದ್ದು ಅದು ಜೀವಕೋಶಗಳು ಮತ್ತು ಹಾರ್ಮೋನುಗಳ ಉತ್ಪಾದನೆಗೆ ಸಹಾಯ ಮಾಡುತ್ತದೆ. ದೇಹದಲ್ಲಿ ಎರಡು ರೀತಿಯ ಕೊಲೆಸ್ಟ್ರಾಲ್ ಇರುತ್ತದೆ. ಒಂದು ಕೆಟ್ಟ ಕೊಲೆಸ್ಟ್ರಾಲ್ (LDL) ಮತ್ತು ಇನ್ನೊಂದು ಒಳ್ಳೆಯ ಕೊಲೆಸ್ಟ್ರಾಲ್ (HDL). ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದಾಗ ಅದು ರಕ್ತನಾಳಗಳಲ್ಲಿ ಶೇಖರಣೆಗೊಂಡು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ.
ತಜ್ಞರ ಪ್ರಕಾರ ನಮ್ಮ ದೇಹದಲ್ಲಿನ ಒಟ್ಟು ಕೊಲೆಸ್ಟ್ರಾಲ್ನ ಸಾಮಾನ್ಯ ಮಟ್ಟವು 200 mg/dL ಗಿಂತ ಕಡಿಮೆಯಿರಬೇಕು. LDL ಎಂದರೆ ಕೆಟ್ಟ ಕೊಲೆಸ್ಟ್ರಾಲ್ 100 mg/dl ಗಿಂತ ಕಡಿಮೆಯಿರಬೇಕು ಮತ್ತು HDL ಅಂದರೆ ಒಳ್ಳೆಯ ಕೊಲೆಸ್ಟ್ರಾಲ್ 60 mg/dl ಗಿಂತ ಹೆಚ್ಚಿರಬೇಕು. ಒಂದು ವೇಳೆ ಕಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ನಿಮ್ಮ ದೇಹದಲ್ಲಿ ರಕ್ತದ ಚಲನೆಗೆ ತೊಂದರೆಯಾಗುತ್ತದೆ.
ಸೇಬುಗಳನ್ನು ತಿನ್ನುವುದರಿಂದ ದೇಹದಲ್ಲಿ ಸಂಗ್ರಹವಾಗಿರುವ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕುತ್ತದೆ ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಬಲಪಡಿಸುತ್ತದೆ. ಸೇಬುಗಳಲ್ಲಿ ಉತ್ತಮ ಪ್ರಮಾಣದ ಪಾಲಿಫಿನಾಲ್ ಮತ್ತು ಫೈಬರ್ ಇದೆ ಎಂದು ಸಂಶೋಧನೆ ತೋರಿಸಿದೆ. ಫೈಬರ್ ನಮ್ಮ ದೇಹವನ್ನು ಪ್ರವೇಶಿಸುತ್ತದೆ ಮತ್ತು ಕೊಬ್ಬಿನಾಮ್ಲಗಳನ್ನು ಉತ್ಪಾದಿಸುತ್ತದೆ, ಇದು ಲಿವರ್ನಲ್ಲಿರುವ ಕೊಲೆಸ್ಟ್ರಾಲ್ ಉತ್ಪಾದನೆಯನ್ನು ಕಡಿಮೆ ಮಾಡುತ್ತದೆ. ಇನ್ನು ಆ್ಯಪಲ್ ದೇಹದಿಂದ ಹೆಚ್ಚುವರಿ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕುತ್ತದೆ.
ಆ್ಯಪಲ್ ವಯಸ್ಸಾದವರಿಗೆ ತುಂಬಾ ಉಪಯುಕ್ತವಾಗಿದೆ: ಇಂಗ್ಲೆಂಡ್‌ನ ಯೂನಿವರ್ಸಿಟಿ ಆಫ್ ರೀಡಿಂಗ್‌ನ ಸಂಶೋಧಕರು 2019 ರಲ್ಲಿ ಈ ಆ್ಯಪಲ್ ಬಗ್ಗೆ ಅಧ್ಯಯನವನ್ನು ನಡೆಸಿದರು. ಈ ಪ್ರಕಾರ ದಿನಕ್ಕೊಂದು ಆ್ಯಪಲ್ ತಿನ್ನುವುದರಿಂದ ವಯಸ್ಸಾದವರಿಗೆ ತುಂಬಾ ಪ್ರಯೋಜನಕಾರಿ ಎಂದು ಅಧ್ಯಯನವೊಂದು ಹೇಳುತ್ತದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು. ಜೊತೆಗೆ ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನೂ ಕಡಿಮೆ ಮಾಡುತ್ತದೆ.