ಗೋಡಂಬಿಯನ್ನು ಸಾಮಾನ್ಯವಾಗಿ ಸಿಹಿತಿಂಡಿಗಳಲ್ಲಿ ಬಳಸಲಾಗುತ್ತದೆ. ಕೆಲವೊಮ್ಮೆ ಇದನ್ನು ಗ್ರೇವಿಗಳಿಗೂ ಸೇರಿಸಲಾಗುತ್ತದೆ. ಇದುವರೆಗೆ ವಾಲ್ ನಟ್ಸ್ ಮತ್ತು ಬಾದಾಮಿಗಳನ್ನು ನೆನೆಸುವ ಬಗ್ಗೆ ನಾವು ಕೇಳಿದ್ದೇವೆ. ಆದರೆ ಗೋಡಂಬಿಯನ್ನು ಸಹ ನೆನೆಸಿ ತಿನ್ನಬಹುದು ಎಂಬುವುದರ ಬಗ್ಗೆ ನಿಮಗೆ ತಿಳಿದಿದೆಯೇ? ಹಾಲಿನಲ್ಲಿ ನೆನೆಸಿದ ಗೋಡಂಬಿಯನ್ನು ತಿನ್ನುವುದರಿಂದ ಮೂಳೆಗಳು ಮತ್ತು ಸ್ನಾಯುಗಳ ಬೆಳವಣಿಗೆಗೆ ಸಹಾಯಕವಾಗಿದೆ ಮತ್ತು ಮಲಬದ್ಧತೆ ನಿವಾರಣೆಗೆ ಕೂಡ ಸಹಾಯ ಮಾಡುತ್ತದೆ.
ರಾತ್ರಿ ಒಂದು ಲೋಟ ಹಾಲಿನಲ್ಲಿ 3-5 ಗೋಡಂಬಿಯನ್ನು ನೆನೆಸಿಡಿ. ಮರುದಿನ ಬೆಳಗ್ಗೆ ಗೋಡಂಬಿಯನ್ನು ಹಾಲಿನಲ್ಲಿ ಚೆನ್ನಾಗಿ ಕುದಿಸಿ. ಕಾದ ನಂತರ ಸ್ಟವ್ ಆಫ್ ಮಾಡಿ ಹಾಲಿನಲ್ಲಿ ಗೋಡಂಬಿಯನ್ನು ಜಗಿದು ಹಾಲನ್ನು ಕುಡಿಯಿರಿ. ಹೆಚ್ಚೆಂದರೆ 5 ಗೋಡಂಬಿಗಿಂತ ಹೆಚ್ಚು ತಿನ್ನಬೇಡಿ. ಹಾಲು ಮತ್ತು ಗೋಡಂಬಿ ಎರಡರಲ್ಲೂ ಕ್ಯಾಲೋರಿಗಳು ಮತ್ತು ಆರೋಗ್ಯಕರ ಕೊಬ್ಬುಗಳು ತೂಕ ಹೆಚ್ಚಾಗಲು ಕಾರಣವಾಗುತ್ತವೆ. ಹಾಗಾಗಿ ಗೋಡಂಬಿಯನ್ನು ಮಿತವಾಗಿ ಸೇವಿಸುವುದನ್ನು ಖಚಿತಪಡಿಸಿಕೊಳ್ಳಿ.ಹಾಲಿನಲ್ಲಿ ನೆನೆಸಿದ ಗೋಡಂಬಿಯನ್ನು ತಿನ್ನುವುದರಿಂದ ಕೆಲವು ಪ್ರಮುಖ ಆರೋಗ್ಯ ಪ್ರಯೋಜನಗಳು ಇಲ್ಲಿವೆ.
ದೃಢವಾದ ಮೂಳೆಗಳು : ರಾತ್ರಿಯಿಡೀ ಹಾಲಿನಲ್ಲಿ ನೆನೆಸಿದ ಗೋಡಂಬಿಯನ್ನು ತಿನ್ನುವುದರಿಂದ ನಿಮ್ಮ ಮೂಳೆಗಳು ಬಲಗೊಳ್ಳುತ್ತವೆ. ಹಾಲಿನಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿದೆ ಎಂದು ನಿಮಗೆ ತಿಳಿದಿದೆ. ವಿಟಮಿನ್ ಕೆ, ಮೆಗ್ನೀಸಿಯಮ್, ವಿಟಮಿನ್ ಬಿ6 ಮತ್ತು ಮ್ಯಾಂಗನೀಸ್ ನಂತಹ ಪೋಷಕಾಂಶಗಳು ಗೋಡಂಬಿಯಲ್ಲಿ ಕಂಡುಬರುತ್ತವೆ. ಈ ಎಲ್ಲಾ ಜೀವಸತ್ವಗಳು ಮತ್ತು ಖನಿಜಗಳು ಮೂಳೆಗಳನ್ನು ಬಲಪಡಿಸುತ್ತದೆ ಮತ್ತು ಕೀಲು ನೋವನ್ನು ನಿವಾರಿಸುತ್ತದೆ. ವಯಸ್ಸಾದವರು ಹಾಲಿನಲ್ಲಿ ನೆನೆಸಿದ ಗೋಡಂಬಿಯನ್ನು ತಿನ್ನುವುದರಿಂದ ಕೀಲು ಮತ್ತು ಮೂಳೆ ನೋವು ನಿವಾರಣೆಯಾಗುತ್ತದೆ.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಪ್ರತಿದಿನ ಹಾಲಿನಲ್ಲಿ ನೆನೆಸಿದ ಗೋಡಂಬಿಯನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಹಾಲು ಮತ್ತು ಗೋಡಂಬಿ ಎರಡೂ ವಿಟಮಿನ್ಗಳು ಮತ್ತು ಖನಿಜಗಳಲ್ಲಿ ಸಮೃದ್ಧವಾಗಿವೆ. ಇವುಗಳನ್ನು ಒಟ್ಟಿಗೆ ತಿನ್ನುವುದರಿಂದ ಸ್ವಾಭಾವಿಕವಾಗಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಹಾಲಿನಲ್ಲಿ ನೆನೆಸಿದ ಗೋಡಂಬಿಯನ್ನು ತಿನ್ನುವುದರಿಂದ ರೋಗಗಳನ್ನು ದೂರವಿಡಬಹುದು.
ಫ್ರೀ ರಾಡಿಕಲ್ಗಳಿಂದ ರಕ್ಷಣೆ: ಗೋಡಂಬಿಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಆದ್ದರಿಂದ ನೀವು ಪ್ರತಿದಿನ ಹಾಲಿನಲ್ಲಿ ನೆನೆಸಿದ ಗೋಡಂಬಿಯನ್ನು ಸೇವಿಸಿದರೆ, ನಿಮ್ಮ ದೇಹವು ಫ್ರೀ ರಾಡಿಕಲ್ಗಳನ್ನು ನಾಶಪಡಿಸುತ್ತದೆ. ಇದು ಫ್ರೀ ರಾಡಿಕಲ್ಗಳಿಂದ ಉಂಟಾಗುವ ಹಾನಿಯಿಂದ ನಮ್ಮ ದೇಹವನ್ನು ರಕ್ಷಿಸುತ್ತದೆ. ನಿಮ್ಮ ದೇಹ ಮತ್ತು ತ್ವಚೆಯನ್ನು ಸುರಕ್ಷಿತವಾಗಿರಿಸಲು ನೀವು ಬಯಸಿದರೆ, ನೀವು ಪ್ರತಿದಿನ ಹಾಲಿನಲ್ಲಿ ನೆನೆಸಿದ ಗೋಡಂಬಿಯನ್ನು ಸೇವಿಸಿ.