ಮಟನ್ ಕರಿ ಮಾಡಲು ಬೇಕಾಗಿರುವ ಸಾಮಾಗ್ರಿಗಳು: ಈರುಳ್ಳಿ – 2, ಟೊಮೆಟೊ – 2, ಶುಂಠಿ, ಬೆಳ್ಳುಳ್ಳಿ ಪೇಸ್ಟ್ – 3 ಟೀಸ್ಪೂನ್, ಗರಂಮಸಾಲೆ – 2 ಚಮಚ, ಕೊತ್ತಂಬರಿ ಪುಡಿ – 2 ಸ್ಪೂನ್, ಜೀರಿಗೆ ಪುಡಿ – 2 ಚಮಚ, ಅರಿಶಿನ – ಅರ್ಧ ಚಮಚ, ಖಾರದಪುಡಿ – ಅರ್ಧ ಚಮಚ, ಕುರಿ ಮಾಂಸ – ಅರ್ಧ ಕೆ.ಜಿ, ಉಪ್ಪು – ರುಚಿಗೆ ತಕ್ಕಷ್ಟು, ಎಣ್ಣೆ– ಸ್ವಲ್ಪ, ಕೊತ್ತಂಬರಿ ಸೊಪ್ಪು – ಸ್ವಲ್ಪ.
ಮತ್ತೆ ಅದನ್ನು ತೆಗೆದು ಮಿಕ್ಸಿ ಜಾರಿಗೆ ಟೊಮೆಟೊ, ಶುಂಠಿ, ಬೆಳ್ಳುಳ್ಳಿ ಪೇಸ್ಟ್ ಸೇರಿಸಿ ರುಬ್ಬಿಕೊಳ್ಳಿ. ಮತ್ತೆ ಪ್ಯಾನ್ ಬಿಸಿ ಮಾಡಿ ಅದಕ್ಕೆ ರುಬ್ಬಿಕೊಂಡಿರುವ ಈರುಳ್ಳಿ ಪೇಸ್ಟ್ ಹಾಕಿ 2 ರಿಂದ 3 ನಿಮಿಷ ಹುರಿದುಕೊಳ್ಳಿ. ಕೊನೆಗೆ ಟೊಮೆಟೊ ಪೇಸ್ಟ್, ಗರಂಮಸಾಲೆ, ಕೊತ್ತಂಬರಿ ಪುಡಿ, ಜೀರಿಗೆ ಪುಡಿ, ಅರಿಸಿನ ಪುಡಿ, ಖಾರದಪುಡಿ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ, ಎಣ್ಣೆ ಬಿಡುವವರೆಗೂ ಕುದಿಸಿ.