ಪ್ರತಿ ಐದು ಮಕ್ಕಳಲ್ಲಿ ಒಬ್ಬರಿಗೆ ಈ ಮೊಡವೆ ಸಮಸ್ಯೆ ಇರುವುದು ಕಂಡುಬಂದಿದೆ. 2-12 ತಿಂಗಳೊಳಗಿನ ಮಕ್ಕಳಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ ಎಂದು ವೈದ್ಯರು ಹೇಳುತ್ತಾರೆ. ಇವುಗಳಿಂದ ದೇಹಕ್ಕೆ ಹೆಚ್ಚಿನ ಹಾನಿಯಾಗದಿದ್ದರೂ ಇದರಿಂದ ಉಂಟಾಗುವ ಲಕ್ಷಣಗಳನ್ನು ಗಮನಿಸದೆ ಬಿಟ್ಟರೆ ಭವಿಷ್ಯದಲ್ಲಿ ಸಾಕಷ್ಟು ಸಮಸ್ಯೆ ಉಂಟಾಗುತ್ತದೆ. ಆದ್ದರಿಂದ ರೋಗಲಕ್ಷಣಗಳು ಕಾಣಿಸಿಕೊಂಡ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.