ನಿಂಬೆ ವಿಟಮಿನ್ ಸಿ ಯ ಉಗ್ರಾಣವಾಗಿದ್ದು, ವಿಟಮಿನ್ ಬಿ 6, ತಾಮ್ರ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಸತು, ಫ್ಲೇವನಾಯ್ಡ್ಗಳು, ಉತ್ಕರ್ಷಣ ನಿರೋಧಕಗಳು ಮತ್ತು ರಂಜಕದಿಂದ ಸಮೃದ್ಧವಾಗಿದೆ. ಇದರಲ್ಲಿ ಕ್ಯಾಲೋರಿ ಮತ್ತು ಕೊಬ್ಬಿನಂಶ ಕಡಿಮೆ ಇದೆ. ನಿಂಬೆಯಲ್ಲಿರುವ ವಿಟಮಿನ್ ಸಿ ದೇಹದಲ್ಲಿ ಕಬ್ಬಿಣವನ್ನು ಹೀರಿಕೊಳ್ಳುವ ಪ್ರಕ್ರಿಯೆಯಲ್ಲಿ ಸಹ ಸಹಾಯ ಮಾಡುತ್ತದೆ.