ರಕ್ತದಾನ ಜೀವದಾನದಷ್ಟೇ ಶ್ರೇಷ್ಟವಾದ ದಾನವಾಗಿದೆ. ಗಂಭೀರ ಸ್ಥಿತಿಯಲ್ಲಿರುವ ಅಥವಾ ಶಸ್ತ್ರಚಿಕಿತ್ಸೆ, ಅಪಘಾತಗಳಿಗೆ ಒಳಗಾದ ಜನ ಬಹಳಷ್ಟು ರಕ್ತವನ್ನು ಕಳೆದುಕೊಳ್ಳುವ ಕಾರಣ ಅವರಿಗೆ ರಕ್ತವನ್ನು ನೀಡಲಾಗುತ್ತದೆ. ಹಾಗಾಗಿ ಕೆಲವರು ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡುತ್ತಾರೆ. ಆದರೆ ಹಿಂದಿನದಕ್ಕೆ ಹೋಲಿಸಿದರೆ ಇತ್ತೀಚಿನ ದಿನಗಳಲ್ಲಿ ರಕ್ತದಾನಿಗಳ ಸಂಖ್ಯೆ ಹೆಚ್ಚಾಗಿದೆ.
ಅದೇ ರೀತಿ ದೇಹದಲ್ಲಿ ಯಾವುದೇ ಸಣ್ಣ ಶಸ್ತ್ರಚಿಕಿತ್ಸೆ ಮಾಡಿದರೂ 6 ತಿಂಗಳವರೆಗೆ ರಕ್ತದಾನ ಮಾಡುವಂತಿಲ್ಲ. ಆರೋಗ್ಯ ವೃತ್ತಿಪರರ ಸಹಾಯದಿಂದ ಹಚ್ಚೆ ಹಾಕಿಸಿಕೊಳ್ಳುವುದು ಸಮಸ್ಯೆಯಲ್ಲ. ಜ್ವರ, ನೆಗಡಿ ಮುಂತಾದವುಗಳಿದ್ದರೂ ರಕ್ತದಾನ ಮಾಡಬೇಡಿ ಎಂದು ವೈದ್ಯಕೀಯ ತಜ್ಞರು ಸೂಚಿಸುತ್ತಾರೆ. (Disclaimer: ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. news18ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ನ್ಯೂಸ್ 18 ಇದಕ್ಕೆ ಜವಾಬ್ದಾರಿಯಲ್ಲ)