ಹಿಂದೂ ಕ್ಯಾಲೆಂಡರ್ ಪ್ರಕಾರ ಈ ಹಬ್ಬದ ವಸಂತ ಋತು ಆರಂಭವಾಗುತ್ತದೆ. ಮರಗಳು, ಗಿಡಗಳು ಚಿಗುರು ಒಡೆಯುತ್ತದೆ. ಶಾಸ್ತ್ರ, ಗ್ರಂಥಗಳಲ್ಲಿ ಯುಗಾದಿಯನ್ನು ಕುರಿತು ಹೇಳಲಾಗಿದೆ. ಶ್ರೀರಾಮನು ರಾವಣನನ್ನು ಸಂಹರಿಸಿ ಬಂದಾಗ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪಟ್ಟಾಭಿಷೇಕವಾದ ದಿನ. ಅಲ್ಲದೆ ಮಹಾಭಾರತದಲ್ಲಿ ಬರುವ ಚೀದಿರಾಜ್ಯದ ಅರಸು ವಸುವಿನ ಉಗ್ರ ತಪಸ್ಸಿಗೆ ಮೆಚ್ಚಿದ ಇಂದ್ರನು ವೈಜಯಂತಿ ಮಾಲೆಯನ್ನು ಅವನಿಗೆ ಕೊಟ್ಟು, ಚಿನ್ನದ ಕಲಶವುಳ್ಳ ಚಕ್ರಾಧಿಪತ್ಯದ ಧ್ವಜವನ್ನು ರಾಜನ ತಲೆಯ ಮೇಲೆ ಇಟ್ಟಿರುವ ದಿನ ಎಂದು ಸಹ ಹೇಳಲಾಗುತ್ತದೆ.