ವೈಕುಂಠ ಏಕಾದಶಿಯ ದಿನ ಶ್ರೀಮನ್ನಾರಾಯಣನ ದರ್ಶನ ಮಾಡಿ, ವೈಕುಂಠ ದ್ವಾರದ ಮೂಲಕ ಹೊರ ಬರಬೇಕು. ಹೀಗೆ ಮಾಡಿದರೆ ಏಳು ಜನ್ಮದಲ್ಲಿ ಮಾಡಿದ ಪಾಪಗಳೂ ನಾಶವಾಗುತ್ತವೆ ಎನ್ನುವ ನಂಬಿಕೆ ಇದೆ. ಅಲ್ಲದೇ, ಶ್ರೀನಿವಾಸ ಉತ್ಸವ ಮೂರ್ತಿಯ ಜೋಕಾಲಿಗೆ ತಲೆ ತಾಕಿಸಿ, ವೈಕುಂಠದ್ವಾರದಿಂದ ಹೊರಬಂದರೆ ಮುಕ್ತಿ ಕಟ್ಟಿಟ್ಟ ಬುತ್ತಿ ಎನ್ನಲಾಗುತ್ತದೆ.