ಕೊತ್ತಂಬರಿ ಸೊಪ್ಪು; ಕೊತ್ತಂಬರಿ ಸೊಪ್ಪಿನಲ್ಲಿ ಖನಿಜಾಂಶಗಳು ಮತ್ತು ವಿಟಮಿನ್ ಗಳು ಹೇರಳವಾಗಿವೆ. ಇವು ಉತ್ತಮ ಆರೋಗ್ಯ ನಿರ್ವಹಣೆ ಮತ್ತು ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ. ಇವುಗಳಲ್ಲಿ ಮೆಗ್ನೀಸಿಯಂ, ವಿಟಮಿನ್ ಬಿ ಮತ್ತು ಫೋಲಿಕ್ ಆಮ್ಲ ಸಮೃದ್ಧವಾಗಿವೆ. ಕೊತ್ತಂಬರಿ ಸೊಪ್ಪನ್ನು ಸಲಾಡ್ ಅಥವಾ ಚಟ್ನಿಗಳಲ್ಲಿ ತಿನ್ನುವುದರಿಂದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಇದರಲ್ಲಿರುವ ಕ್ವೆರ್ಸೆಟಿನ್ ಅಂಶ ತೂಕ ಇಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದು ಜೀರ್ಣಕ್ರಿಯೆ ಸುಧಾರಿಸುತ್ತದೆ. ಕೊತ್ತಂಬರಿ ಸೊಪ್ಪನ್ನು ಉಗುರುಬೆಚ್ಚಗಿನ ನೀರಿನಲ್ಲಿ ನೆನೆಸಿ ನಂತರ ಆ ನೀರನ್ನು ಕುಡಿಯುವುದರಿಂದ ಬೇಗ ತೂಕ ಇಳಿಸಬಹುದು.
ಕರಿಬೇವು: ಎಲ್ಲರ ಮನೆಯಲ್ಲು ಅಡುಗೆಗೆ ಕರಿಬೇವನ್ನು ಬಳಸಲಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಗಳನ್ನು ತಿಂದ್ರೆ ತೂಕ ಕಡಿಮೆಯಾಗುತ್ತದೆ. ಇದು ಪೋಷಕಾಂಶಗಳು, ಸಸ್ಯ ಆಧಾರಿತ ಸಂಯುಕ್ತಗಳನ್ನು ಒಳಗೊಂಡಿದೆ. ಇದು ಆರಂಭದ ಸ್ಥೂಲಕಾಯತೆ ಮತ್ತು ಕೊಬ್ಬನ್ನು ಕಡಿಮೆ ಮಾಡುತ್ತದೆ. ಕರಿಬೇವು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಈ ಮೂಲಿಕೆಯನ್ನು ಹಸಿಯಾಗಿ ತಿನ್ನುವುದರಿಂದ ಮಧುಮೇಹವನ್ನು ನಿಯಂತ್ರಿಸಬಹುದು. ಇದು ರಕ್ತವನ್ನು ಕೂಡ ಶುದ್ಧಗೊಳಿಸುತ್ತದೆ.
ರೋಸ್ಮರಿ: ಇದು ಪುದೀನಾ ಜಾತಿಯ ಮೂಲಿಕೆ. ಇದರಲ್ಲಿ ಉತ್ಕರ್ಷಣ ನಿರೋಧಕ ಸಮೃದ್ಧವಾಗಿದೆ. ಇವು ಜೀವಕೋಶಗಳ ಪುನರುತ್ಪಾದನೆಗೆ ಸಹಾಯ ಮಾಡುತ್ತವೆ. ತಾಜಾ ರೋಸ್ಮರಿಯನ್ನು ಆಹಾರದಲ್ಲಿ ಸೇರಿಸುವುದರಿಂದ ದೇಹಕ್ಕೆ ಉಂಟಾಗುವ ಹಾನಿಯನ್ನು ತಡೆಯುತ್ತದೆ. ಇದು ಚಯಾಪಚಯವನ್ನು ಸುಧಾರಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಇದರ ಉರಿಯೂತ ನಿವಾರಕ ಗುಣಗಳು ನೀರಿನ ತೂಕವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಕೊಬ್ಬನ್ನು ಕಡಿಮೆ ಮಾಡಿ.
ಪಾರ್ಸ್ಲಿ; ಇದು ಕೊತ್ತಂಬರಿ ಜಾತಿಯ ಮೂಲಿಕೆ. ಇದು ನೈಸರ್ಗಿಕವಾಗಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ಇದು ನೈಸರ್ಗಿಕವಾಗಿ ಸಾಕಷ್ಟು ಯುಜೆನಾಲ್ ಅನ್ನು ಹೊಂದಿರುತ್ತದೆ. ಇದು ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಲು ಮತ್ತು ಚಯಾಪಚಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಈ ಮೂಲಿಕೆಯಲ್ಲಿ ಫೈಬರ್ನಲ್ಲಿಯೂ ಸಮೃದ್ಧವಾಗಿದೆ. ಜೀರ್ಣಕಾರಿ ಸಮಸ್ಯೆಗಳು, ಮಲಬದ್ಧತೆ ಸಮಸ್ಯೆಗೆ ರಾಮಬಾಣವಾಗಿದೆ.