ನಿಯಮಿತ ವ್ಯಾಯಾಮ, ಸಮತೋಲಿತ ಆಹಾರ, ಮತ್ತು ಉತ್ತಮ ಜೀವನಶೈಲಿಯು ಒತ್ತಡ ನಿರ್ವಹಣೆ ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆ ನಿವಾರಿಸುತ್ತದೆ. ಮೊಬೈಲ್‌ನಲ್ಲಿ ಹೆಚ್ಚು ಮಾತನಾಡುವುದು ರಕ್ತದೊತ್ತಡ ಸಮಸ್ಯೆ ಹೆಚ್ಚಿಸುತ್ತದೆ. ಒಂದು ವಾರದಲ್ಲಿ 30 ನಿಮಿಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಮೊಬೈಲ್ ಫೋನ್‌ನಲ್ಲಿ ಮಾತನಾಡಿದರೆ ಅಧಿಕ ರಕ್ತದೊತ್ತಡ ಸಮಸ್ಯೆ ಎದುರಾಗುತ್ತದೆ ಎಂದು ಸಂಶೋಧನೆಯೊಂದು ಎಚ್ಚರಿಸಿದೆ.