ಗ್ರೀನ್ ಟೀ: ಈ ಟೀಯಲ್ಲಿ ಉತ್ತಮ ಪ್ರಮಾಣದ ಆ್ಯಂಟಿಆಕ್ಸಿಡೆಂಟ್ಗಳಿವೆ. ಶಕ್ತಿಯ ಮಟ್ಟ ಮತ್ತು ಚಯಾಪಚಯವನ್ನು ಹೆಚ್ಚಿಸುವಲ್ಲಿ ಇದು ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಅಷ್ಟೇ ಅಲ್ಲದೇ, ಇದು ತ್ವಚೆಯ ಮೇಲೂ ಪರಿಣಾಮಕಾರಿಯಾಗಿದ್ದು, ಆ್ಯಂಟಿ ಏಜಿಂಗ್ ಸಮಸ್ಯೆಯನ್ನು ಹೋಗಲಾಡಿಸಲು ನೆರವಾಗುತ್ತದೆ. ಜೊತೆಗೆ ಗ್ರೀನ್ ಟೀ ಕುಡಿಯುವುದರಿಂದ ಹೃದಯ ಸಂಬಂಧಿ ಕಾಯಿಲೆಗಳು ಬರುವುದಿಲ್ಲ.