Heat Wave Alert: ಕರ್ನಾಟಕದ ಈ ಜಿಲ್ಲೆಗಳಿಗೆ ಶುರುವಾಯ್ತು ಹೊಸ ಸಮಸ್ಯೆ!

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ನಿರೀಕ್ಷೆಯಿದೆ.

First published:

  • 17

    Heat Wave Alert: ಕರ್ನಾಟಕದ ಈ ಜಿಲ್ಲೆಗಳಿಗೆ ಶುರುವಾಯ್ತು ಹೊಸ ಸಮಸ್ಯೆ!

    ಕರ್ನಾಟಕ ಕರಾವಳಿಯಲ್ಲಿ ತಾಪಮಾನ ದಿನೇ ದಿನೇ ಹೆಚ್ಚುತ್ತಿದೆ. ಇದೇ ವೇಳೆ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ ನೀಡಿದೆ. ಮುಂದಿನ ಎರಡು ವಾರಗಳ ಹವಾಮಾನದ ಕುರಿತು ಹವಾಮಾನ ಇಲಾಖೆ ಮುಂಜಾಗೃತೆಯ ಮಾಹಿತಿಯನ್ನು ಬಿಡುಗಡೆ ಮಾಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Heat Wave Alert: ಕರ್ನಾಟಕದ ಈ ಜಿಲ್ಲೆಗಳಿಗೆ ಶುರುವಾಯ್ತು ಹೊಸ ಸಮಸ್ಯೆ!

    ಮುಂದಿನ ಎರಡು ವಾರಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಅಥವಾ ಹೀಟ್ ವೇವ್ ಬೀಸಲಿರುವ ಸಾಧ್ಯತೆಯ ಬಗ್ಗೆ ಹವಾಮಾನಶಾಸ್ತ್ರಜ್ಞರು ಸುಳಿವು ನೀಡಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯ ವ್ಯಾಪ್ತಿಯಿಂದ ಮೂರು ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Heat Wave Alert: ಕರ್ನಾಟಕದ ಈ ಜಿಲ್ಲೆಗಳಿಗೆ ಶುರುವಾಯ್ತು ಹೊಸ ಸಮಸ್ಯೆ!

    ಈಗಾಗಲೇ ತೀವ್ರ ಉಷ್ಣದ ಅಲೆ ಪರಿಸ್ಥಿತಿಯಿಂದ ತತ್ತರಿಸಿರುವ ಕರ್ನಾಟಕದ ಹಲವು ಭಾಗಗಳಲ್ಲಿ ಗರಿಷ್ಠ 36-37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ. ಕಳೆದೆರಡು ದಿನಗಳಿಂದ ಉತ್ತರ ಕರ್ನಾಟಕ ಭಾಗದ ಕಲಬುರಗಿ ಮುಂತಾದ ಜಿಲ್ಲೆಗಳಲ್ಲಿ ಈಗಾಗಲೇ 40 ಡಿಗ್ರಿ ಸೆಲ್ಸಿಯಸ್ ದಾಟಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Heat Wave Alert: ಕರ್ನಾಟಕದ ಈ ಜಿಲ್ಲೆಗಳಿಗೆ ಶುರುವಾಯ್ತು ಹೊಸ ಸಮಸ್ಯೆ!

    ಮೈಸೂರು ಮತ್ತು ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 36-37 ಡಿಗ್ರಿ ಸೆಲ್ಸಿಯಸ್ನಷ್ಟಿದೆ. ಇದು ಈ ಭಾಗದ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿ ಹೆಚ್ಚು ಎಂದು ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿ ಎ ಪ್ರಸಾದ್ ತಿಳಿಸಿದ್ದಾರೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Heat Wave Alert: ಕರ್ನಾಟಕದ ಈ ಜಿಲ್ಲೆಗಳಿಗೆ ಶುರುವಾಯ್ತು ಹೊಸ ಸಮಸ್ಯೆ!

    ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳಲ್ಲಿ ಬೇಸಿಗೆಯಲ್ಲಿ ಸಾಮಾನ್ಯ ತಾಪಮಾನವು 33-35 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತಿತ್ತು. ಆದರೆ ಈ ವರ್ಷ ತಾಪಮಾನ 37-38 ಡಿಗ್ರಿ ಸೆಲ್ಸಿಯಸ್ ಅನ್ನು ಮುಟ್ಟುವ ಸಾಧ್ಯತೆಯಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Heat Wave Alert: ಕರ್ನಾಟಕದ ಈ ಜಿಲ್ಲೆಗಳಿಗೆ ಶುರುವಾಯ್ತು ಹೊಸ ಸಮಸ್ಯೆ!

    ಹೆಚ್ಚುತ್ತಿರುವ ತಾಪಮಾನವು ಕರಾವಳಿ ಪ್ರದೇಶದಲ್ಲಿ ಉಷ್ಣದ ಅಲೆಯನ್ನು ಸೃಷ್ಟಿಸಬಹುದು. ಕರಾವಳಿಯಲ್ಲಿ ಹೆಚ್ಚಿದ ತಾಪಮಾನ ನಾಗರಿಕರ ಆರೋಗ್ಯ ಸಮಸ್ಯೆಗೆ ಕಾರಣವಾಗುವ ಆತಂಕವಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Heat Wave Alert: ಕರ್ನಾಟಕದ ಈ ಜಿಲ್ಲೆಗಳಿಗೆ ಶುರುವಾಯ್ತು ಹೊಸ ಸಮಸ್ಯೆ!

    ಕರಾವಳಿ ಜಿಲ್ಲೆಗಳಲ್ಲಿ ಉಷ್ಣಾಂಶ 45 ಡಿಗ್ರಿಯನ್ನು ದಾಟಿ ಎರಡು ದಿನಗಳ ಕಾಲ ಅದೇ ತಾಪಮಾನ ಮುಂದುವರೆದರೆ ಹೀಟ್ ವೇವ್ ಉಂಟಾಗುವುದು ಪಕ್ಕಾ ಎಂದು IMD ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಮೂಲಕ ಇದುವರೆಗೂ ಇರದಿದ್ದ ಹೀಟ್ ವೇವ್ ಸಮಸ್ಯೆಯೊಂದು ಕರಾವಳಿಗೆ ಕಾಲಿಟ್ಟಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES