Karnataka Rains: ಕರ್ನಾಟಕದ 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್, 4 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ
Dakshina Kannada Rain Updates: ಮಳೆಯಿಂದ ಕಂಗೆಟ್ಟ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹಾಗಾದರೆ ಯಾವ ಜಿಲ್ಲೆಗಳಲ್ಲಿ ಮಳೆ ಸುರಿಯುವ ಪ್ರಮಾಣ ಹೇಗಿರಲಿದೆ? ಇಲ್ಲಿದೆ ಮಾಹಿತಿ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇನ್ನೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
2/ 8
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
3/ 8
ಈ 3 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.
4/ 8
ರೆಡ್ ಅಲರ್ಟ್ ಎಂದರೆ 204 ಮಿ.ಮೀಟರ್ಗಿಂತ ಅಧಿಕ ಮಳೆಯಾಗುವ ಮುನ್ಸೂಚನೆಯಾಗಿದೆ.
5/ 8
ಅಲ್ಲದೇ ರಾಜ್ಯದ 4 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
6/ 8
ಆರೆಂಜ್ ಅಲರ್ಟ್ ಅಂದರೆ 115.6 ಮಿ.ಮೀಟರ್ನಿಂದ 204.4 ಮಿ.ಮೀಟರ್ ಮಳೆಯಾಗುವ ಮುನ್ಸೂಚನೆಯಾಗಿದೆ.
7/ 8
ಭಾರೀ ಮಳೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಸಾರ್ವಜನಿಕರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ.
8/ 8
ಸಾಮಾನ್ಯವಾಗಿ ಜೂನ್ನಲ್ಲಿ ಭಾರತದ ಸರಾಸರಿ ಮಳೆಯ ಪ್ರಮಾಣ 16.53 ಸೆಂ.ಮೀ. ಆಗಬೇಕಿತ್ತು. ಮಾನ್ಸೂನ್ ಮುಂಚಿತವಾಗಿ ಪ್ರವೇಶಿಸಿದ್ರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿದಿಲ್ಲ. (ಸಾಂದರ್ಭಿಕ ಚಿತ್ರ)