Dakshina Kannada Viral News: ಇಲ್ಲಿ ರಾಜಕಾರಣಿಗಳಿಗೆ ಪ್ರವೇಶವೇ ಇಲ್ಲ!

ಯಾವುದೇ ರಾಜಕಾರಣಿಗಳಿಗೆ ನಮ್ಮ ಮನೆಯ ಗೇಟಿನೊಳಗೆ ಪ್ರವೇಶವಿಲ್ಲ ಎಂಬ ದೊಡ್ಡದಾದ ಫಲಕವನ್ನು ಮನೆಯೊಂದರ ಗೇಟಿನಲ್ಲಿ ಹಾಕಿದ ಘಟನೆಯ ಹಿಂದಿನ ಕಥೆಯಿದು!

First published:

  • 18

    Dakshina Kannada Viral News: ಇಲ್ಲಿ ರಾಜಕಾರಣಿಗಳಿಗೆ ಪ್ರವೇಶವೇ ಇಲ್ಲ!

    ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇನ್ನೇನು ಕೆಲವು ದಿನಗಳಲ್ಲಿ ಹೊಸ ಸರ್ಕಾರದ ರಚನೆ ಆಗಿದೆ. ಅಧಿಕಾರಕ್ಕಾಗಿ ರಾಜಕಾರಣಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಇತ್ತ ರಾಜಕಾರಣಿಗಳ ವಿರುದ್ಧ ಸಾರ್ವಜನಿಕರೊಬ್ಬರು ವಿಶಿಷ್ಟ ರೀತಿಯಲ್ಲಿ ಪ್ರತಿಭಟಿಸುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 28

    Dakshina Kannada Viral News: ಇಲ್ಲಿ ರಾಜಕಾರಣಿಗಳಿಗೆ ಪ್ರವೇಶವೇ ಇಲ್ಲ!

    ಯಾವುದೇ ರಾಜಕಾರಣಿಗಳಿಗೆ ನಮ್ಮ ಮನೆಯ ಗೇಟಿನೊಳಗೆ ಪ್ರವೇಶವಿಲ್ಲ ಎಂಬ ದೊಡ್ಡದಾದ ಫಲಕವನ್ನು ಮನೆಯೊಂದರ ಗೇಟಿನಲ್ಲಿ ಅಳವಡಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 38

    Dakshina Kannada Viral News: ಇಲ್ಲಿ ರಾಜಕಾರಣಿಗಳಿಗೆ ಪ್ರವೇಶವೇ ಇಲ್ಲ!

    ಸುಳ್ಯ ತಾಲೂಕಿನಾದ್ಯಂತ ನಾನಾ ಭಾಗಗಳಲ್ಲಿ ಸಾರ್ವಜನಿಕರು ಮತದಾನ ಬಹಿಷ್ಕಾರ ಬ್ಯಾನರ್​ಗಳನ್ನು ಅಳವಡಿಸುತ್ತಿದ್ದಾರೆ. ಈ ಮೂಲಕ ಸುಳ್ಯ ತಾಲೂಕಿನಲ್ಲಿ ಸಂಚಲನ ಮೂಡುತ್ತಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 48

    Dakshina Kannada Viral News: ಇಲ್ಲಿ ರಾಜಕಾರಣಿಗಳಿಗೆ ಪ್ರವೇಶವೇ ಇಲ್ಲ!

    ಆದರೆ ಇದಕ್ಕೆಲ್ಲ ವ್ಯತಿರಿಕ್ತವಾಗಿ ಮತದಾರರೋರ್ವರು ಯಾವುದೇ ರಾಜಕಾರಣಿಗಳಿಗೆ ನಮ್ಮ ಮನೆಯ ಗೇಟಿನೊಳಗೆ ಪ್ರವೇಶವಿಲ್ಲ ಎಂಬ ಫಲಕವನ್ನು ಅಳವಡಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 58

    Dakshina Kannada Viral News: ಇಲ್ಲಿ ರಾಜಕಾರಣಿಗಳಿಗೆ ಪ್ರವೇಶವೇ ಇಲ್ಲ!

    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಮುಂಡೋಳಿ ಮೂಲೆಯ ಗೋಪಾಲಕೃಷ್ಣ ಅವರ ಮನೆಯವರು ಈ ಭಾಗದ ರಸ್ತೆ ನಿರ್ಮಾಣ ಸಂದರ್ಭದಲ್ಲಿ ತಮ್ಮ ಕೃಷಿ ಭೂಮಿಯಿಂದ ರಸ್ತೆಗೆ ಬೇಕಾದ ಮಣ್ಣನ್ನು ನೀಡಿದ್ದರು. (ಸಾಂದರ್ಭಿಕ ಚಿತ್ರ)

    MORE
    GALLERIES

  • 68

    Dakshina Kannada Viral News: ಇಲ್ಲಿ ರಾಜಕಾರಣಿಗಳಿಗೆ ಪ್ರವೇಶವೇ ಇಲ್ಲ!

    ಆದರೆ ರಸ್ತೆಗೆ ಸುರಿಯುವ ಮಣ್ಣು ಮಳೆಗಾಲದಲ್ಲಿ ವಾಪಸ್ ಬಂದು ಮೋರಿಯಲ್ಲಿ ಸಿಕ್ಕಿಕೊಳ್ಳುತ್ತಿದೆ. ಈ ಭಾಗದಲ್ಲಿ ಹರಿದು ಬರುವ ನೀರು ಅವರ ಕೃಷಿ ಭೂಮಿಯಲ್ಲಿ ತುಂಬಿಕೊಳ್ಳುತ್ತಿದೆ. ಇದನ್ನು ಸರಿಪಡಿಸಿಕೊಡುವಂತೆ ಮನವಿ ಸಂಬಂಧಪಟ್ಟವರಿಗೆ ಸಲ್ಲಿಸಿದರೂ ಇದುವರೆಗೆ ಸಮಸ್ಯೆ ಬಗೆಹರಿದಿಲ್ಲ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 78

    Dakshina Kannada Viral News: ಇಲ್ಲಿ ರಾಜಕಾರಣಿಗಳಿಗೆ ಪ್ರವೇಶವೇ ಇಲ್ಲ!

    ಇಷ್ಟೇ ಅಲ್ಲದೇ, ಗಂಗಾ ಕಲ್ಯಾಣ ಯೋಜನೆಯಡಿ ನೀರಿನ ಸಮಸ್ಯೆ ಬಗೆ ಹರಿಸುತ್ತೇವೆಂದು ಸುಳ್ಯ ತಾಲೂಕಿನ ಅಜ್ಜಾವರ ಮುಂಡೋಳಿ ಮೂಲೆಯ ಗೋಪಾಲಕೃಷ್ಣ ಅವರಿಗೆ ಶಾಸಕರು ಭರವಸೆ ನೀಡಿದ್ದರಂತೆ. ಆದರೆ ಇದುವರೆಗೂ ಸಮಸ್ಯೆ ಪರಿಹಾರವಾಗಿಲ್ಲ. (ಸಾಂದರ್ಭಿಕ ಚಿತ್ರ)

    MORE
    GALLERIES

  • 88

    Dakshina Kannada Viral News: ಇಲ್ಲಿ ರಾಜಕಾರಣಿಗಳಿಗೆ ಪ್ರವೇಶವೇ ಇಲ್ಲ!

    ಈ ಎಲ್ಲ ಸಮಸ್ಯೆಗಳು ಬಾಕಿ ಇರುವುದರಿಂದ ನಮ್ಮ ಮನೆಯ ಕಡೆಗೆ ರಾಜಕಾರಣಿಗಳು ಬರಬೇಡಿ ಎಂದು ಮುಂಡೋಳಿಮೂಲೆ ಮನೆಯವರು ಈ ಬೋರ್ಡ್ ತಮ್ಮ ಗೇಟಿಗೆ ನೇತು ಹಾಕಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES