Bus Accident: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್‌! 12 ಸಾವು, 27ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮುಂಬೈ: ಸಾಂಸ್ಕೃತಿಕ ತಂಡದ ಸದಸ್ಯರನ್ನು ಕರೆದೊಯ್ಯುತ್ತಿದ್ದ ಬಸ್‌ವೊಂದು ಕಂದಕಕ್ಕೆ ಉರುಳಿ ಬಿದ್ದು 12ಕ್ಕೂ ಮಂದಿ ಸಾವನ್ನಪ್ಪಿ 27ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

First published:

 • 17

  Bus Accident: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್‌! 12 ಸಾವು, 27ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

  ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ ಪುಣೆ ಹೆದ್ದಾರಿಯ ಮಧ್ಯೆ ಶನಿವಾರ ಮುಂಜಾನೆ ಈ ದುರಂತ ಸಂಭವಿಸಿದ್ದು, ಬೃಹತ್ ಕಂದಕಕ್ಕೆ ಬಸ್ ಉರುಳಿ ಬಿದ್ದಿದ್ದರಿಂದ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

  MORE
  GALLERIES

 • 27

  Bus Accident: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್‌! 12 ಸಾವು, 27ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

  ಸಾಂಪ್ರದಾಯಿಕ ಸಾಂಸ್ಕೃತಿಕ ತಂಡದ ಸದಸ್ಯರನ್ನು ಹೊತ್ತ ಖಾಸಗಿ ಬಸ್ ಪುಣೆಯಿಂದ ಮುಂಬೈಗೆ ಹೋಗುತ್ತಿದ್ದಾಗ ಹೆದ್ದಾರಿಯ ಶಿಂಗ್ರೋಬಾ ದೇವಸ್ಥಾನದ ಬಳಿ ಬೆಳಿಗ್ಗೆ 4:50 ರ ಸುಮಾರಿಗೆ ಈ ದುರ್ಘಟನೆ ನಡೆದಿದೆ.

  MORE
  GALLERIES

 • 37

  Bus Accident: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್‌! 12 ಸಾವು, 27ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

  ಮುಂಬೈನ ಗೋರೆಗಾಂವ್‌ ಬಾಜಿ ಪ್ರಭು ವಾಡಕ್ ಗ್ರೂಪ್‌ನ ಸದಸ್ಯರು ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್ ಪ್ರದೇಶದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮುಗಿಸಿ ವಾಪಸ್‌ ಗೋರೆಗಾಂವ್‌ಗೆ ಹಿಂತಿರುಗುತ್ತಿದ್ದರು.

  MORE
  GALLERIES

 • 47

  Bus Accident: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್‌! 12 ಸಾವು, 27ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

  ಶನಿವಾರ ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ ಬಸ್ ಪಿಂಪ್ರಿ ಚಿಂಚ್‌ವಾಡ್ ಪ್ರದೇಶದಿಂದ ಕಾರ್ಯಕ್ರಮ ಮುಗಿಸಿ ನಿರ್ಗಮಿಸಿತ್ತು. ಅಪಘಾತದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದು, 27 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

  MORE
  GALLERIES

 • 57

  Bus Accident: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್‌! 12 ಸಾವು, 27ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

  ದುರ್ಘಟನೆಯಲ್ಲಿ ಮೃತ ವ್ಯಕ್ತಿಗಳು ಮತ್ತು ಗಾಯಗೊಂಡವರು ಮುಂಬೈನ ಸಿಯಾನ್ ಮತ್ತು ಗೋರೆಗಾಂವ್ ಮತ್ತು ನೆರೆಯ ಪಾಲ್ಘರ್ ಜಿಲ್ಲೆಯ ವಿರಾರ್‌ಗೆ ಸೇರಿದವರು ಎಂದು ರಾಯಗಢ ಪೊಲೀಸರು ತಿಳಿಸಿದ್ದಾರೆ.

  MORE
  GALLERIES

 • 67

  Bus Accident: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್‌! 12 ಸಾವು, 27ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

  ಸದ್ಯ ದುರ್ಘಟನೆಯಲ್ಲಿ ಗಾಯಗೊಂಡವರನ್ನು ಖೋಪೋಲಿ ಗ್ರಾಮಾಂತರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರು ಮತ್ತು ಗಾಯಗೊಂಡವರು 18 ರಿಂದ 25 ವರ್ಷ ವಯಸ್ಸಿನವರು ಎಂದು ಪೊಲೀಸರು ತಿಳಿಸಿದ್ದಾರೆ.

  MORE
  GALLERIES

 • 77

  Bus Accident: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್‌! 12 ಸಾವು, 27ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

  ಸ್ಥಳೀಯ ಪೊಲೀಸರ ತಂಡ ಮತ್ತು ಚಾರಣಿಗರ ತಂಡ ಸದ್ಯ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಖೋಪೋಲಿ ಪಟ್ಟಣವು ಮುಂಬೈನಿಂದ 70 ಕಿಮೀ ದೂರದಲ್ಲಿದೆ.

  MORE
  GALLERIES