Street Dog: 2 ದಿನದಲ್ಲಿ ಒಂದೇ ತಾಯಿಯ ಇಬ್ಬರು ಮಕ್ಕಳು ಬೀದಿನಾಯಿ ದಾಳಿಗೆ ಸಾವು! ಕರುಳು ಹಿಂಡುವ ಭಯಾನಕ ಘಟನೆ!
ಹೊಸದಿಲ್ಲಿ: ಕೇವಲ ಎರಡು ದಿನದ ಅಂತರದಲ್ಲಿ ಒಂದೇ ತಾಯಿಯ ಇಬ್ಬರು ಮಕ್ಕಳು ಬೀದಿ ನಾಯಿ ದಾಳಿಗೆ ತುತ್ತಾಗಿ ಮೃತಪಟ್ಟಿರುವ ಆಘಾತಕಾರಿ ಘಟನೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಡೆದಿದೆ. ರಾಷ್ಟ್ರ ರಾಜಧಾನಿಯ ನೈಋತ್ಯ ಪ್ರದೇಶದಲ್ಲಿ 7 ಮತ್ತು 5 ವರ್ಷ ವಯಸ್ಸಿನ ಸೋದರರನ್ನು ಬೀದಿನಾಯಿಗಳ ಗುಂಪು ದಾಳಿ ಮಾಡಿ ಕೊಂದಿದ್ದು, ಮಕ್ಕಳನ್ನು ಕಳೆದುಕೊಂಡ ತಾಯಿಯ ಸಂಕಟವನ್ನು ಹೇಳತೀರದಾಗಿದೆ.
ಮೃತ ಮಕ್ಕಳನ್ನು ಆನಂದ್ ಮತ್ತು ಆತನ ಕಿರಿಯ ಸಹೋದರ ಆದಿತ್ಯ ಎಂದು ಗುರುತಿಸಲಾಗಿದ್ದು, ಇಬ್ಬರೂ ದೆಹಲಿಯ ವಸಂತ್ ಕುಂಜ್ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.
2/ 8
ಮಾರ್ಚ್ 10 ರಂದು ಮಧ್ಯಾಹ್ನ 3 ಗಂಟೆಗೆ ಮಗು ಕಾಣೆಯಾಗಿರುವ ಬಗ್ಗೆ ವಸಂತ್ ಕುಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಾದ ಬೆನ್ನಲ್ಲೇ ಪೊಲೀಸರು ಮಗುವಿನ ತಾಯಿಯೊಂದಿಗೆ ತೀವ್ರ ಹುಡುಕಾಟವನ್ನು ನಡೆಸಿದ್ದರು.
3/ 8
ಎರಡು ಗಂಟೆಗಳ ನಂತರ ನಿರ್ಜನ ಪ್ರದೇಶದಲ್ಲಿನ ಗೋಡೆಯ ಬಳಿ ಕಾಣೆಯಾದ ಮಗು ಆನಂದ್‌ನ ಮೃತದೇಹ ಪತ್ತೆಯಾಗಿತ್ತು. ಪ್ರಾಣಿಗಳ ಕಡಿತದಿಂದಾದ ಅನೇಕ ಗಾಯಗಳ ಗುರುತು ಆತನ ದೇಹದ ಮೇಲೆ ಕಂಡುಬಂದಿತ್ತು.
4/ 8
ಎಫ್‌ಐಆರ್ ಪ್ರಕಾರ ಬಾಲಕನ ಕಾಲು, ಬೆನ್ನು, ಸೊಂಟ, ಕುತ್ತಿಗೆ ಮತ್ತು ತಲೆಯ ಮೇಲೆ ಗಾಯದ ಗುರುತುಗಳು ಇರೋದು ಪತ್ತೆಯಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ತಂಡವೊಂದು ಸ್ಥಳದಿಂದ ಕೆಲವು ರಕ್ತದ ಕಲೆಯ ಬಟ್ಟೆಗಳು ಮತ್ತು ಇತರ ವಸ್ತುಗಳನ್ನು ಪರೀಕ್ಷೆಗೊಳಪಡಿಸಿದೆ.
5/ 8
ಒಬ್ಬ ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದ ತಾಯಿ ಆ ನೋವನ್ನು ಮರೆಯುವ ಮುನ್ನವೇ ಮತ್ತೊಂದು ಇಂತಹದೇ ಘಟನೆ ಸಿಡಿಲಿನಂತೆ ಬಡಿದಪ್ಪಳಿಸಿದ್ದು, ಆಕೆಯ ಮತ್ತೊಬ್ಬ ಕಿರಿಯ ಮಗ ಕೂಡ ಬೀದಿ ನಾಯಿಗಳ ದಾಳಿಯಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
6/ 8
ನಾಯಿ ದಾಳಿಯಿಂದ ಮೃತಪಟ್ಟವ ಆನಂದ್ ಕಿರಿಯ ಸೋದರ ಆದಿತ್ಯ ತನ್ನ ಸೋದರಸಂಬಂಧಿ ಚಂದನ್ (24) ಎಂಬಾತನೊಂದಿಗೆ ಅಲ್ಲೇ ಪಕ್ಕದಲ್ಲಿದ್ದ ಸ್ಥಳಕ್ಕೆ ಶೌಚ ಮಾಡಲು ಹೋಗಿದ್ದಾನೆ. ಈ ವೇಳೆ, ಚಂದನ್ ಆದಿತ್ಯನಿಂದ ಸ್ವಲ್ಪ ದೂರದಲ್ಲಿದ್ದಾಗ ಬೀದಿನಾಯಿಗಳು ಆತನನ್ನು ಸುತ್ತುವರಿದು ಕಚ್ಚಿ ಎಳೆದಾಡಿದೆ.
7/ 8
ಅದೇ ಸಮಯದಲ್ಲಿ ದೆಹಲಿ ಪೊಲೀಸ್ ಸಬ್-ಇನ್‌ಸ್ಪೆಕ್ಟರ್ ಒಬ್ಬರು ಆ ಸ್ಥಳದ ಪಕ್ಕದಲ್ಲಿ ಇದ್ದರು. ಆಗ ಅವರು ಗಾಯಗೊಂಡ ಬಾಲಕನನ್ನು ತನ್ನ ಕಾರಿನಲ್ಲಿ ವಸಂತ್ ಕುಂಜ್‌ನ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಆದರೆ ಬಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
8/ 8
ಮಕ್ಕಳನ್ನು ಕಳೆದುಕೊಂಡು ತೀವ್ರ ಆಘಾತಕ್ಕೆ ಒಳಗಾಗಿರುವ ಬಾಲಕರ ತಾಯಿ ‘ಎಲ್ಲವೂ ಮುಗಿಯಿತು ಇನ್ನೇಕೆ ನಾನು ಬದುಕಬೇಕು’ ಎಂದು ನೋವು ವ್ಯಕ್ತಪಡಿಸಿದ್ದಾರೆ. ಪರಿಹಾರದ ಭರವಸೆ ನೀಡಲಾಗಿದೆಯೇ ಎಂಬ ಪ್ರಶ್ನೆಗೆ ‘ಈಗ ಹಣ ತೆಗೆದುಕೊಂಡು ನಾನೇನು ಮಾಡಲಿ, ನನ್ನ ಮಕ್ಕಳನ್ನು ವಾಪಸ್ ಕೊಡುತ್ತಾರೆಯೇ’ ಎಂದು ಅಸಹಾಯಕತೆಯಿಂದ ಕಣ್ಣೀರು ಸುರಿಸಿದ್ದಾರೆ.
First published:
18