ಪ್ಯಾರಾಗ್ಲೈಡಿಂಗ್ ಮಾಡುತ್ತಿದ್ದ ಪ್ರವಾಸಿಗರೋರ್ವರು ನೂರಾರು ಅಡಿ ಎತ್ತರದಿಂದ ಬಿದ್ದು ಮೃತಪಟ್ಟ ಭೀಕರ ಘಟನೆಯೊಂದು ನಡೆದಿದೆ. (ಸಾಂದರ್ಭಿಕ ಚಿತ್ರ)
2/ 8
ಮಹಾರಾಷ್ಟ್ರದ 30 ವರ್ಷದ ಪ್ರವಾಸಿಗರೊಬ್ಬರು ಶನಿವಾರ ಕುಲು ಜಿಲ್ಲೆಯ ದೋಭಿ ಪ್ರದೇಶದಲ್ಲಿ ಪ್ಯಾರಾಗ್ಲೈಡಿಂಗ್ ವೇಳೆ ಬಿದ್ದು ಸಾವನ್ನಪ್ಪಿದ್ದಾರೆ. (ಸಾಂದರ್ಭಿಕ ಚಿತ್ರ)
3/ 8
ಪ್ಯಾರಾಗ್ಲೈಡಿಂಗ್ ಮಾಡುತ್ತಿದ್ದ ಪ್ರವಾಸಿ ಸ್ಥಳದಲ್ಲೇ ಮೃತಪಟ್ಟರೆ, ಪ್ಯಾರಾಗ್ಲೈಡರ್ ಪೈಲಟ್ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
4/ 8
ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಶಿರ್ವಾಲ್ ಗ್ರಾಮದ ಸೂರಜ್ ಸಂಜಯ್ ಶಾ (30) ಮೃತಪಟ್ಟ ದುರ್ದೈವಿ. ತನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಆಗಮಿಸಿದ್ದ ಈ ವ್ಯಕ್ತಿ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ. (ಸಾಂದರ್ಭಿಕ ಚಿತ್ರ)
5/ 8
ಪೈಲಟ್ ಸುರಕ್ಷಿತವಾಗಿದ್ದಾರೆ. ಆದರೆ ಪ್ರವಾಸಿಗ ಸ್ಥಳದಲ್ಲೇ ಗಾಯಗೊಂಡಿದ್ದಾರೆ ಎಂದು ಕುಲು ಪೊಲೀಸ್ ವರಿಷ್ಠಾಧಿಕಾರಿ ಗುರುದೇವ್ ಶರ್ಮಾ ಭಾನುವಾರ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)
6/ 8
ನಿರ್ಲಕ್ಷ್ಯ ಕಾಯ್ದೆಯ ಸೆಕ್ಷನ್ 336 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕಾಯ್ದೆ) ಮತ್ತು 304A (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವ ಕಾಯ್ದೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. (ಸಾಂದರ್ಭಿಕ ಚಿತ್ರ)
7/ 8
ಇತ್ತೀಚಿಗಷ್ಟೇ ಪ್ಯಾರಾಗ್ಲೈಡಿಂಗ್ ಮಾಡುತ್ತಿದ್ದ ಬೆಂಗಳೂರಿನ 12 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಭಾರೀ ಸಂಚಲನ ಮೂಡಿಸಿತ್ತು. (ಸಾಂದರ್ಭಿಕ ಚಿತ್ರ)
8/ 8
ಹಿಮಾಚಲ ಪ್ರದೇಶ ಹೈಕೋರ್ಟ್ ಈ ವರ್ಷದ ಜನವರಿಯಲ್ಲಿ ರಾಜ್ಯದಲ್ಲಿ ಪ್ಯಾರಾಗ್ಲೈಡಿಂಗ್ ಮತ್ತು ಇತರ ಎಲ್ಲಾ ಸಾಹಸ ಕ್ರೀಡೆಗಳನ್ನು ನಿಷೇಧಿಸಿದೆ. (ಸಾಂದರ್ಭಿಕ ಚಿತ್ರ)