(PHOTOS) : ಗುರುಗ್ರಾಮನಲ್ಲಿ ನಾಲ್ಕು ಅಂತಸ್ಥಿನ ಕಟ್ಟಡ ಕುಸಿತ
ನಾಲ್ಕು ಅಂತಸ್ಥಿನ ಕಟ್ಟಡ ಕುಸಿದು 8ಕ್ಕೂ ಹೆಚ್ಚು ಕಾರ್ಮಿಕರು ಕಟ್ಟಡದ ಅವಶೇಷಗಳ ಕೆಳಗೆ ಸಿಲುಕಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ 5 ಗಂಟೆ ವೇಳೆಗೆ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದಿದೆ. ಘಟನೆ ಬಗ್ಗೆ ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಅಗ್ನಿಶಾಮಕ ಸಿಬ್ಬಂದಿ ಜೊತೆ ಎನ್ಡಿಆರ್ಎಫ್ನ ಮೂರು ತಂಡ ಕೈ ಜೋಡಿಸಿ ರಕ್ಷಣಾ ಕಾರ್ಯ ಮುಂದುವರೆಸಿವೆ. ಕೆಲವು ಚಿತ್ರಗಳು ನಿಮ್ಮ ನ್ಯೂಸ್ 18 ಕನ್ನಡದಲ್ಲಿ