ಘಟನೆ ಕುರಿತು ಪ್ರತಿಕ್ರಿಯಿಸಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಅಮೃತಸರದ ಗುರುನಾನಕ್ ಆಸ್ಪತ್ರೆಯಲ್ಲಿ ದುರದೃಷ್ಟಕರ ಘಟನೆ ವರದಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕಟ್ಟೆಚ್ಚರದಲ್ಲಿದ್ದಾರೆ. ದೇವರ ದಯೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಚಿವ ಹರ್ಭಜನ್ ಸಿಂಗ್ ಘಟನಾ ಸ್ಥಳಕ್ಕೆ ತಲುಪಿದ್ದಾರೆ. ಪರಿಹಾರ ಕಾರ್ಯದ ಮೇಲೆ ನಿರಂತರ ನಿಗಾ ಇಡುತ್ತಿದ್ದೇನೆ ಎಂದಿದ್ದಾರೆ.