ದೆಹಲಿ: ಕಳೆದ ನಾಲ್ಕೈದು ವರ್ಷಗಳಿಂದ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ತನ್ನ ಗೆಳತಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
ಕೊಲೆಗೀಡಾದ ಯುವತಿಯನ್ನು ರೋಹಿನಾ ನಾಝ್ ಎಂದು ಗುರುತಿಸಲಾಗಿದ್ದು, ಈಕೆ ವಿನೀತ್ ಪವಾರ್ ಜೊತೆ ಕಳೆದ ನಾಲ್ಕು ವರ್ಷದ ಹಿಂದಿನಿಂದ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿ ಇದ್ದರು.
2/ 7
4 ವರ್ಷಗಳ ಹಿಂದೆ ಇವರಿಬ್ಬರು ಮನೆಬಿಟ್ಟು ಬಂದು ಜತೆಯಾಗಿದ್ದ ಕಾರಣ ರೋಹಿನಾ ಕೆಲ ಸಮಯದಿಂದ ವಿನೀತ್‌ಗೆ ತನ್ನನ್ನು ಮದುವೆ ಆಗುವಂತೆ ಬೇಡಿಕೆ ಇಟ್ಟಿದ್ದಳು. ಆದರೆ ಆತ ಮದುವೆಯ ಬೇಡಿಕೆಯನ್ನು ತಿರಸ್ಕಾರ ಮಾಡಿದ್ದ.
3/ 7
ಇದೇ ವಿಚಾರವಾಗಿ ಇಬ್ಬರ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಕಳೆದ ಏಪ್ರಿಲ್ 12ರಂದು ಇಬ್ಬರ ಮಧ್ಯೆ ಪುನಃ ಮದುವೆ ವಿಚಾರವಾಗಿ ಜಗಳ ಶುರುವಾಗಿದ್ದು, ಆಗ ಸಿಟ್ಟಿಗೆದ್ದ ವಿನೀತ್, ರೋಹಿನಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
4/ 7
ಕೊಲೆ ಮಾಡಿದ ಬಳಿಕ ಆಕೆಯ ಮೃತದೇಹವನ್ನು ಮನೆಯಿಂದ ಸುಮಾರು 12 ಕಿಲೋ ಮೀಟರ್ ದೂರದ ಪ್ರದೇಶದಲ್ಲಿ ಎಸೆದು ಬಂದಿದ್ದಾನೆ. ಅಲ್ಲದೇ ಬಳಿಕ ಏನೂ ನಡೆದೇ ಇಲ್ಲವೆಂಬಂತೆ ಇದ್ದ.
5/ 7
ಏಪ್ರಿಲ್ 12ರ ತಡರಾತ್ರಿ ಮಹಿಳೆಯ ಮೃತದೇಹವನ್ನು ಯಾರೋ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪರೀಕ್ಷೆ ಮಾಡಿದಾಗ ಆಕೆಯ ದೇಹದಲ್ಲಿ ಯಾವುದೇ ಗಾಯದ ಗುರುತುಗಳು ಕಂಡುಬಂದಿರಲಿಲ್ಲ, ಮರಣೋತ್ತರ ಪರೀಕ್ಷೆಯ ನಂತರ ಆಕೆಯನ್ನು ಕತ್ತು ಹಿಸುಕಿ ಕೊಂದಿರುವುದು ಬೆಳಕಿಗೆ ಬಂದಿದೆ.
6/ 7
ಮೃತದೇಹ ಪತ್ತೆಯಾದ ನಂತರ ಅರೋಪಿಗಳನ್ನ ಪತ್ತೆಹಚ್ಚಲು 50ಕ್ಕೂ ಹೆಚ್ಚು ಪೊಲೀಸರನ್ನೊಳಗೊಂಡ ವಿಶೇಷ ತಂಡವನ್ನ ರಚಿಸಲಾಗಿತ್ತು. ಶವ ಪತ್ತೆಯಾದ ಸ್ಥಳದಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸಿದಾಗ ಬೈಕ್‌ನಲ್ಲಿ ಇಬ್ಬರು ಪುರುಷರು ಮೃತದೇಹ ಎಸೆದು ಹೋಗಿರುವುದು ಕಂಡುಬಂದಿತ್ತು.
7/ 7
ವೀಡಿಯೋದಲ್ಲಿ ಒಬ್ಬ ವ್ಯಕ್ತಿ ತನ್ನ ಭುಜದ ಮೇಲೆ ಮೃತದೇಹ ಹೊತ್ತುಕೊಂಡು ಹೋಗುತ್ತಿದ್ದನು, ಈ ವೇಳೆ ಆರೋಪಿಯ ಸಹೋದರಿ ಪಾರುಲ್ ಕೂಡ ಶವ ವಿಲೇವಾರಿ ಮಾಡಲು ಆತನಿಗೆ ಸಹಾಯ ಮಾಡಿದ್ದಾಳೆ. ಆಕೆಯನ್ನು ವಿಚಾರಣೆಗೆ ಒಳಪಡಿಸಿದಾಗ ಸತ್ಯ ಒಪ್ಪಿಕೊಂಡಿದ್ದಾಳೆ.