ಕೆಂಡ್ರಾ ಲಸ್ಟ್ ಮತ್ತೊಂದು ಟ್ವೀಟ್ ಮಾಡಿದ್ದು, ಅದರಲ್ಲಿ ವಿಡಿಯೋ ಶೇರ್ ಮಾಡಿಕೊಂಡಿ, #india ಎಂದು ಬರೆದುಕೊಂಡಿದ್ದಾರೆ. ಟ್ವೀಟ್‌ನಲ್ಲಿ #BiharRailwayStation ಎಂಬ ಹ್ಯಾಶ್‌ಟ್ಯಾಗ್ ಅನ್ನು ಬಳಸಿದ್ದಾರೆ. ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದು, ಸುಮಾರು 8 ಲಕ್ಷಕ್ಕೂ ಹೆಚ್ಚು ವೀಕ್ಷಣೆಯಾಗಿದೆ. ಅಲ್ಲದೆ ಹಲವು ಮಂದಿಗೆ ತಮಾಷೆಯಾಗಿ ಕಮೆಂಟ್ ಮಾಡಿದ್ದು, ಎಲ್ಲರಿಗೂ ನಟಿ ಪ್ರತಿಕ್ರಿಯೆ ನೀಡಿದ್ದಾರೆ.
ರೈಲ್ವೆ ನಿಲ್ದಾಣದ ಟಿವಿ ಪರದೆಯ ಮೇಲೆ ಜಾಹೀರಾತುಗಳನ್ನು ಪ್ರದರ್ಶಿಸುವ ಕೆಲಸವನ್ನು ನಿರ್ವಹಿಸುವ ಏಜೆನ್ಸಿಯ ತಪ್ಪನಿಂದ ಈ ಅವಾಂತರವಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಪ್ರಯಾಣಿಕರಿಗೆ ಹಾಗೂ ರೈಲ್ವೆ ಇಲಾಖೆಗೆ ಸಾಕಷ್ಟು ಮುಜುಗರ ತಂದಿದ್ದರಿಂದ ಆ ಏಜೆನ್ಸಿಯನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ. ಈ ಪ್ರಕರಣದಲ್ಲಿ ದತ್ತಾ ಕಮ್ಯುನಿಕೇಷನ್ ಹೆಸರಿನ ಏಜೆನ್ಸಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಏಜೆನ್ಸಿಯ ಜಾಹೀರಾತು ಪ್ರದರ್ಶಿಸುವ ಗುತ್ತಿಗೆಯನ್ನು ರದ್ದುಗೊಳಿಸಲಾಗಿದೆ.