ಮಹಾರಾಷ್ಟ್ರ ಚುನಾವಣೆ ಫಲಿತಾಂಶ ಅತಂತ್ರವಾದ ನಂತರ ಶಿವಸೇನೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದು ಕೂತಿತ್ತು. ಇತ್ತ ಬಿಜೆಪಿ ಕೂಡ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಕಾರಣವೊಡ್ಡಿ ಶಿವಸೇನೆಗೆ ಮುಖ್ಯಮಂತ್ರಿ ಸ್ಥಾನ ಕೊಡಲು ಸಾಧ್ಯವಿಲ್ಲ ಎಂದಿತ್ತು.
2/ 9
ಫಲಿತಾಂಶ ಬಂದ ದಿನದಿಂದ ಸರ್ಕಾರ ರಚನೆ ಅನಿಶ್ಚಿತತೆಯತ್ತ ಸಾಗಿತ್ತು. ಇದೀಗ ಬಿಜೆಪಿ ಟ್ರಬಲ್ ಶೂಟರ್ ನಿತಿನ್ ಗಡ್ಕರಿ ಎಂಟ್ರಿ ಮತ್ತು ಸಾಂವಿಧಾನಿಕ ಬಿಕ್ಕಟ್ಟಿನ ತೂಗುಗತ್ತಿ ಹಿನ್ನೆಲೆಯಲ್ಲಿ ಬಿಜೆಪಿ - ಶಿವಸೇನೆ ಚುನಾವಣಾ ಪೂರ್ವ ಮೈತ್ರಿಯಂತೆ ಸರ್ಕಾರ ರಚಿಸುವ ಸಾಧ್ಯತೆ ದಟ್ಟವಾಗುತ್ತಿದೆ
3/ 9
ಇನ್ನೊಂದೆಡೆ 50:50 ಸೂತ್ರಕ್ಕೆ ಒಪ್ಪಿದರೆ ಮಾತ್ರ ಸರ್ಕಾರ ರಚನೆಗೆ ಬೆಂಬಲ ನೀಡುತ್ತೇವೆ ಎಂದು ಶಿವಸೇನೆ ಪಟ್ಟು ಹಿಡಿದಿದೆ.
4/ 9
ಸಿಎಂ ದೇವೇಂದ್ರ ಫಡ್ನವೀಸ್ ಸೇರಿದಂತೆ ಮಹಾರಾಷ್ಟ್ರ ಬಿಜೆಪಿ ನಾಯಕರು ಎಷ್ಟೇ ಪ್ರಯತ್ನಿಸಿದರೂ ಶಿವಸೇನೆ ಒಪ್ಪಂದಕ್ಕೆ ಒಪ್ಪಿದರೇ ಮಾತ್ರ ಸರ್ಕಾರ ರಚನೆ ಎನ್ನುತ್ತಿದೆ
5/ 9
ಇದರಿಂದ ಸರ್ಕಾರ ರಚಿಸುವುದು ಬಿಜೆಪಿಗೆ ಮತ್ತಷ್ಟು ಕಗ್ಗಂಟಾಗಿ ಪರಿಣಮಿಸಿದೆ
6/ 9
ಮಹಾರಾಷ್ಟ್ರ ಸರ್ಕಾರ ರಚನೆ ಕಸರತ್ತು ಕಗ್ಗಂಟ್ಟಾಗಿ ಪರಿಣಾಮಿಸಿದ್ದು, ಸರ್ಕಾರ ರಚನೆಗೆ ಇನ್ನೆರಡು ದಿನದ ಡೆಡ್ಲೈನ್ ನೀಡಲಾಗಿದೆ.
7/ 9
ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳು ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು, ಕಾಂಗ್ರೆಸ್ ನಾಯಕ ಅಹಮದ್ ಪಟೇಲ್ ಅವರನ್ನು ಬಿಜೆಪಿ ನಾಯಕ ನಿತಿನ್ ಗಡ್ಕರಿ ಭೇಟಿ ಮಾಡಿ ಅಚ್ಚರಿ ಮೂಡಿಸಿದ್ದಾರೆ.
8/ 9
ಮಹಾರಾಷ್ಟ್ರದಲ್ಲಿ ಸಿಎಂ ಪಟ್ಟಕ್ಕಾಗಿ ಶಿವಸೇನೆ ಮತ್ತು ಬಿಜೆಪಿ ನಡುವೆ ಕುಸ್ತಿ ನಡೆಯುತ್ತಿದೆ
9/ 9
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಮುಂದುವರಿದ ಸಂಬಂಧ ದೇವೇಂದ್ರ ಫಡ್ನವೀಸ್ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ