ಕುಂಭಮೇಳದಲ್ಲಿ ಅಮಿತ್ ಶಾ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಪವಿತ್ರ ಸ್ನಾನ

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬುಧವಾರ ಉತ್ತರಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಕುಂಭಮೇಳದಲ್ಲಿ ಭಾಗವಹಿಸಿದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಡನೆ ಕುಂಭಮೇಳದ ತ್ರಿವೇಣಿ ಸಂಗಮಕ್ಕೆ ತೆರಳಿದ ಅಮಿತ್ ಶಾ ಪವಿತ್ರ ಸ್ನಾನ ಮಾಡಿದರು. ಈ ವೇಳೆ ಉತ್ತರಪ್ರದೇಶ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಮಹೇಂದ್ರನಾಥ್ ಪಾಂಡೆ, ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಅಖಾರಾ ಪರಿಷದ್ ಅಧ್ಯಕ್ಷ ನರೇಂದ್ರ ಗಿರಿ ಅವರು ಶಾ ಅವರಿಗೆ ಸಾಥ್ ನೀಡಿದರು. ಬಳಿಕ ಗಂಗಾ ಆರತಿ ನೆರವೇರಿಸಿದ ಬಿಜೆಪಿ ಅಧ್ಯಕ್ಷರು ಹನುಮಾನ್ ದೇವಾಲಯಕ್ಕೆ ಭೇಟಿ ನೀಡಿದರು.

  • News18
  • |
First published: