ನಾಮಪತ್ರ ಸಲ್ಲಿಸುವ ಮುನ್ನ ರೋಡ್ ಶೋ ನಡೆಸಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​​​​​​​​

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಾಮಪತ್ರ ಸಲ್ಲಿಸುವ ಮುನ್ನ ವಿವಿಧ ರಸ್ತೆಗಳಲ್ಲಿ ರೋಡ್ ಶೋ ನಡೆಸಿದರು. ಸತತ ಮೂರನೇ ಬಾರಿಗೆ ತಮ್ಮ ಅದೃಷ್ಟ ಪರೀಕ್ಷಿಸುತ್ತಿದ್ದು, ಅರವಿಂದ್ ಕೇಜ್ರಿವಾಲ್ ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಈ ಮೊದಲು ಈ ವಿಧಾನಸಭಾ ಕ್ಷೇತ್ರವನ್ನು ಗೋಲ್ ಮಾರ್ಕೆಟ್ ಅಸೆಂಬ್ಲಿ ಕ್ಷೇತ್ರ ಎಂದು ಕರೆಯಲಾಗುತ್ತಿತ್ತು. ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು 1998 ಮತ್ತು 2003 ರ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಗೆದ್ದಿದ್ದರು.

First published: