ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಂದೋರ್ ಕಲೆಕ್ಟರ್ ಇಳಯರಾಜ ಟಿ, ‘ಒಟ್ಟು 35 ಜನರು ಸಾವನ್ನಪ್ಪಿದ್ದಾರೆ, ಒಬ್ಬರು ನಾಪತ್ತೆಯಾಗಿದ್ದಾರೆ ಮತ್ತು 14 ಜನರನ್ನು ರಕ್ಷಿಸಲಾಗಿದೆ. ಇಬ್ಬರು ಚಿಕಿತ್ಸೆ ಪಡೆದ ನಂತರ ಸುರಕ್ಷಿತವಾಗಿ ಮನೆಗೆ ಮರಳಿದ್ದಾರೆ. ಕಾಣೆಯಾದವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ’ ಎಂದಿದ್ದಾರೆ.