ಭಾರೀ ಮಳೆಯಿಂದಾಗಿ ಅಸ್ಸಾಂನ ಗುಡ್ಡಗಾಡು ಜಿಲ್ಲೆಗಳಲ್ಲಿ ಗರಿಷ್ಠ ಪರಿಣಾಮ ಕಂಡುಬರುತ್ತಿದೆ. ಗುಡ್ಡಗಳ ಮೇಲೆ ಭೂಕುಸಿತಗಳು ನಡೆಯುತ್ತಿದ್ದು, ಹಲವು ರಸ್ತೆಗಳು ಬಂದ್ ಆಗಿವೆ. ಪರ್ವತ ಜಿಲ್ಲೆ ದಿಮಾ ಹಸಾವೊದಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದಾಗಿ ಹಲವೆಡೆ ಭೂಕುಸಿತದ ವರದಿಯಾಗಿದೆ. ಎತ್ತರದ ಸ್ಥಳಗಳಲ್ಲಿ ಕೆಲವರು ಸಿಕ್ಕಿಬಿದ್ದಿದ್ದು, ಅವರನ್ನು ರಕ್ಷಿಸಲು ವಿಪತ್ತು ನಿರ್ವಹಣಾ ತಂಡ ಕೆಲಸ ಮಾಡುತ್ತಿದೆ.
ತುರ್ತು ಅಗತ್ಯವಿದ್ದಾಗ ಮಾತ್ರ ಮನೆಯಿಂದ ಹೊರಗೆ ಬರುವಂತೆ ಕಾಮೃಪ್ ಮಹಾನಗರ ಜಿಲ್ಲಾಡಳಿತ ಜನರಿಗೆ ಮನವಿ ಮಾಡಿದೆ. ಪ್ರಾದೇಶಿಕ ಹವಾಮಾನ ಕೇಂದ್ರ (ಆರ್‌ಎಂಸಿ) ನೀಡಿದ ಮಳೆಯ ಎಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡು ತರಗತಿಗಳನ್ನು ಸ್ಥಗಿತಗೊಳಿಸುವಂತೆ ಕಾಮರೂಪ್ ಮೆಟ್ರೋಪಾಲಿಟನ್ ಉಪ ಆಯುಕ್ತ ಪಲ್ಲವ್ ಗೋಪಾಲ್ ಝಾ ಅವರು ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದ್ದಾರೆ.