Boat Tragedy: ಕೇರಳ ಭೀಕರ ದುರಂತ, ಬೋಟ್ ಮುಳುಗಿ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆ!

ಮಲ್ಲಪ್ಪುರಂ: ಡಬಲ್ ಡೆಕ್ಕರ್‌ ದೋಣಿ ಮುಳುಗಿ ಏಳು ಮಕ್ಕಳು ಸೇರಿದಂತೆ ಈವರೆಗೆ ಕನಿಷ್ಠ 22 ಮಂದಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಕಡಲತೀರದ ಬಳಿ ನಡೆದಿದೆ. ಭಾನುವಾರ ಸಂಜೆ ಈ ಭೀಕರ ದುರ್ಘಟನೆ ಸಂಭವಿಸಿದ್ದು, ಘಟನೆ ನಡೆದ ಸ್ಥಳದಲ್ಲಿ ಸ್ಮಶಾನ ಮೌನ ಆವರಿಸಿದೆ.

First published:

 • 17

  Boat Tragedy: ಕೇರಳ ಭೀಕರ ದುರಂತ, ಬೋಟ್ ಮುಳುಗಿ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆ!

  ಜಿಲ್ಲೆಯ ತಾನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಪ್ರವಾಸಿಗರು ಬೋಟ್‌ನಲ್ಲಿ ಸಂಚಾರ ನಡೆಸುತ್ತಿದ್ದರು. ಆದರೆ ಏಕಾಏಕಿ ಬೋಟ್ ಮುಳುಗಡೆ ಆಗಿದ್ದರಿಂದ ಅವಘಡ ಸಂಭವಿಸಿದೆ. ಬೋಟ್‌ನಲ್ಲಿದ್ದ ಪ್ರಯಾಣಿಕರ ಸಂಖ್ಯೆ ನಿಖರವಾಗಿ ತಿಳಿದಿಲ್ಲವಾದರೂ, 40 ಮಂದಿ ಟೆಕೆಟ್‌ಗಳನ್ನು ಖರೀದಿಸಿದ್ದರು ಎಂದು ತಿಳಿದು ಬಂದಿದೆ.

  MORE
  GALLERIES

 • 27

  Boat Tragedy: ಕೇರಳ ಭೀಕರ ದುರಂತ, ಬೋಟ್ ಮುಳುಗಿ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆ!

  ಪ್ರಕರಣ ಸಂಬಂಧ ಬೋಟ್ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ದೋಣಿಯಲ್ಲಿ ಟಿಕೆಟ್ ಪಡೆಯದವರೂ ಇದ್ದರಲ್ಲದೇ ದೋಣಿಗೆ ಸುರಕ್ಷತಾ ಪ್ರಮಾಣ ಪತ್ರವೂ ಇರಲಿಲ್ಲ ಎಂದು ವರದಿಯಾಗಿದೆ.

  MORE
  GALLERIES

 • 37

  Boat Tragedy: ಕೇರಳ ಭೀಕರ ದುರಂತ, ಬೋಟ್ ಮುಳುಗಿ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆ!

  ಘಟನೆ ನಡೆದ ತಕ್ಷಣ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನೂ ನಾಪತ್ತೆಯಾದವರನ್ನು ಪತ್ತೆ ಹಚ್ಚಲು ನೀರೊಳಗೆ ಕ್ಯಾಮೆರಾಗಳನ್ನು ಬಳಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

  MORE
  GALLERIES

 • 47

  Boat Tragedy: ಕೇರಳ ಭೀಕರ ದುರಂತ, ಬೋಟ್ ಮುಳುಗಿ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆ!

  ಈ ಭೀಕರ ದುರ್ಘಟನೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಾದ್ಯಂತ ನಾಯಕರು ತಮ್ಮ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ ₹ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

  MORE
  GALLERIES

 • 57

  Boat Tragedy: ಕೇರಳ ಭೀಕರ ದುರಂತ, ಬೋಟ್ ಮುಳುಗಿ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆ!

  ಕಾಂಗ್ರೆಸ್ ನಾಯಕ ಮತ್ತು ಮಾಜಿ ವಯನಾಡ್ ಸಂಸದ ರಾಹುಲ್ ಗಾಂಧಿ ಕೂಡ ಘಟನೆ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಕಾಂಗ್ರೆಸ್‌ ಕಾರ್ಯಕರ್ತರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿ ಅಧಿಕಾರಿಗಳಿಗೆ ಸಹಕರಿಸಿ ಎಂದು ಟ್ವೀಟ್‌ ಮಾಡಿದ್ದಾರೆ.

  MORE
  GALLERIES

 • 67

  Boat Tragedy: ಕೇರಳ ಭೀಕರ ದುರಂತ, ಬೋಟ್ ಮುಳುಗಿ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆ!

  ಘಟನಾ ಸ್ಥಳಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿ ನೀಡಿದ್ದು, ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಮಲಪ್ಪುರಂ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಪೊಲೀಸ್, ಅಗ್ನಿಶಾಮಕ ಮತ್ತು ಆರೋಗ್ಯಾಧಿಕಾರಿಗಳು ಸ್ಥಳೀಯರೊಂದಿಗೆ ತಾನೂರಿನಿಂದ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

  MORE
  GALLERIES

 • 77

  Boat Tragedy: ಕೇರಳ ಭೀಕರ ದುರಂತ, ಬೋಟ್ ಮುಳುಗಿ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆ!

  ಇನ್ನು ಸಂತ್ರಸ್ತರಿಗೆ ಗೌರವ ಸಲ್ಲಿಸುವ ಸೂಚಕವಾಗಿ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡುವುದರೊಂದಿಗೆ ಸೋಮವಾರವನ್ನು ಶೋಕಾಚರಣೆಯ ದಿನವನ್ನಾಗಿ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.

  MORE
  GALLERIES