Padma Awards 2022: ಕನ್ನಡಿಗ ಅಬ್ದುಲ್ ಖಾದರ್, ನೀರಜ್​ ಚೋಪ್ರಾ ಸೇರಿದಂತೆ ಹಲವರಿಗೆ ಪದ್ಮ ಪ್ರಶಸ್ತಿ ಪ್ರದಾನ

ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಯನ್ನು (Padma Award) ಇಂದು ರಾಷ್ಟ್ರಪತಿಗಳು (President Ram Nath Kovind) ಪ್ರದಾನ ಮಾಡಿದರು. ಪ್ರಸಕ್ತ ಸಾಲಿನಲ್ಲಿ 128 ಮಂದಿಗೆ ಈ ಪದ್ಮ ಪ್ರಶಸ್ತಿ ಘೋಷಿಸಲಾಗಿದೆ. ಕಳೆದೊಂದು ವಾರದ ಹಿಂದೆ ಕೆಲವು ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಇಂದು 74 ಮಂದಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಸೇರಿದಂತೆ ಹಲವರು ಉಪಸ್ಥಿತರಿದ್ದರು. (Photo Credits: ANI)

First published: