Mosque: ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಸಿಕ್ತು ಗ್ರೀನ್ ಸಿಗ್ನಲ್; ಸದ್ಯದಲ್ಲೇ ಕಾಮಗಾರಿ ಕೆಲಸ ಆರಂಭ

ನವದೆಹಲಿ: ಇಡೀ ದೇಶಕ್ಕೆ ಕಗ್ಗಂಟಾಗಿದ್ದ ಅಯೋಧ್ಯೆಯ ರಾಮಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ವಿವಾದಕ್ಕೆ ಎರಡು ವರ್ಷದ ಹಿಂದೆ ಸುಪ್ರೀಂ ಕೋರ್ಟ್‌ ಇತೀ ಶ್ರೀ ಹಾಡಿತ್ತು. ಸುಪ್ರೀಂ ಕೋರ್ಟ್‌ ನ್ಯಾಯಪೀಠ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡೋದರ ಜೊತೆಗೆ ಅಯೋಧ್ಯೆಯ ಧನ್ನೀಪುರದಲ್ಲಿ ಮಸೀದಿ ನಿರ್ಮಾಣ ಮಾಡುವಂತೆ ಆದೇಶಿಸಿ ತೀರ್ಪು ನೀಡಿತ್ತು. ಇದೀಗ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಯೋಜನೆಗೆ ಇರುವ ಎಲ್ಲಾ ಕಾನೂನು ಕಗ್ಗಂಟು ನಿವಾರಣೆಯಾಗಿ ಮಸೀದಿ ನಿರ್ಮಾಣಕ್ಕೆ ಅನುಮೋದನೆ ದೊರಕಿದೆ.

First published:

  • 16

    Mosque: ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಸಿಕ್ತು ಗ್ರೀನ್ ಸಿಗ್ನಲ್; ಸದ್ಯದಲ್ಲೇ ಕಾಮಗಾರಿ ಕೆಲಸ ಆರಂಭ

    ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಅನ್ವಯ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಯೋಜನೆಗೆ ಅಯೋಧ್ಯಾ ಅಭಿವೃದ್ಧಿ ಪ್ರಾಧಿಕಾರ (ADA) ಅಂತಿಮ ಅನುಮೋದನೆ ನೀಡಿದೆ.

    MORE
    GALLERIES

  • 26

    Mosque: ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಸಿಕ್ತು ಗ್ರೀನ್ ಸಿಗ್ನಲ್; ಸದ್ಯದಲ್ಲೇ ಕಾಮಗಾರಿ ಕೆಲಸ ಆರಂಭ

    ಉತ್ತರ ಪ್ರದೇಶ ಸರ್ಕಾರವು ಸುಪ್ರೀಂ ಕೋರ್ಟ್‌ ತೀರ್ಪು ಪ್ರಕಾರ ಮಸೀದಿ ನಿರ್ಮಾಣ ಮಾಡಲು 5 ಎಕರೆ ಭೂಮಿ ಮಂಜೂರು ಮಾಡಿದೆ. ಮಸೀದಿ ನಿರ್ಮಾಣ ಯೋಜನೆಗೆ ಅನುಮೋದನೆ ನೀಡಲಾಗಿದೆ. ಒಂದೆರಡು ದಿನಗಳಲ್ಲಿ ಅನುಮೋದನೆ ಪಡೆದ ನಕ್ಷೆಯನ್ನು ಐಐಸಿಎಫ್ ಪ್ರತಿನಿಧಿಗಳಿಗೆ ನೀಡಲಾಗುವುದು ಎಂದು ಎಡಿಎನ ಹೆಚ್ಚುವರಿ ಆಯುಕ್ತ ಗೌರವ್ ದಯಾಳ್ ತಿಳಿಸಿದ್ದಾರೆ

    MORE
    GALLERIES

  • 36

    Mosque: ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಸಿಕ್ತು ಗ್ರೀನ್ ಸಿಗ್ನಲ್; ಸದ್ಯದಲ್ಲೇ ಕಾಮಗಾರಿ ಕೆಲಸ ಆರಂಭ

    ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ಅನುಮೋದನೆ ನೀಡುವುದು ವಿಳಂಬವಾದ್ದರಿಂದ ಮಸೀದಿ ನಿರ್ಮಾಣ ಚಟುವಟಿಕೆ ಇದುವರೆಗೂ ಆರಂಭವಾಗಿರಲಿಲ್ಲ. ಇದೀಗ ಮಸೀದಿಯ ಜೊತೆಗೆ ಆಸ್ಪತ್ರೆ, ಸಂಶೋಧನಾ ಸಂಸ್ಥೆ, ಸಮುದಾಯ ಅಡುಗೆ ಮನೆ, ಗ್ರಂಥಾಲಯ ನಿರ್ಮಾಣ ಮಾಡಲು ಇಂಡೋ-ಇಸ್ಲಾಮಿಕ್ ಸಾಂಸ್ಕೃತಿಕ ಫೌಂಡೇಷನ್ ಸಂಸ್ಥೆ ನಿರ್ಧರಿಸಿದೆ.

    MORE
    GALLERIES

  • 46

    Mosque: ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಸಿಕ್ತು ಗ್ರೀನ್ ಸಿಗ್ನಲ್; ಸದ್ಯದಲ್ಲೇ ಕಾಮಗಾರಿ ಕೆಲಸ ಆರಂಭ

    ಐಐಸಿಎಫ್ ಕಾರ್ಯದರ್ಶಿ ಅತ್ತಾರ್ ಹುಸೇನ್ ಅವರು, ಮಂಜೂರಾತಿಯ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಮಸೀದಿ ನಿರ್ಮಾಣ ಯೋಜನೆಗೆ ಅಂತಿಮರೂಪ ನೀಡಲು ಟ್ರಸ್ಟ್ ಸಭೆ ಕರೆಯಲಿದೆ ಎಂದು ತಿಳಿಸಿದ್ದಾರೆ.

    MORE
    GALLERIES

  • 56

    Mosque: ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಸಿಕ್ತು ಗ್ರೀನ್ ಸಿಗ್ನಲ್; ಸದ್ಯದಲ್ಲೇ ಕಾಮಗಾರಿ ಕೆಲಸ ಆರಂಭ

    ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಮಾಡಲು 2021ರ ಜನವರಿ 26ರಂದು ಶಂಕುಸ್ಥಾಪನೆ ಮಾಡಲಾಗಿತ್ತು. ಭಾರತದ ಸಂವಿಧಾನವು ಜಾರಿಗೆ ಬಂದ ದಿನವಾದ ಕಾರಣ ಆ ದಿನದಂದೇ ಶಂಕುಸ್ಥಾಪನೆ ನೆರವೇರಿಸಲಾಗಿತ್ತು ಎಂದು ಅತ್ತಾರ್ ಹುಸೇನ್ ತಿಳಿಸಿದ್ದಾರೆ.

    MORE
    GALLERIES

  • 66

    Mosque: ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಸಿಕ್ತು ಗ್ರೀನ್ ಸಿಗ್ನಲ್; ಸದ್ಯದಲ್ಲೇ ಕಾಮಗಾರಿ ಕೆಲಸ ಆರಂಭ

    ರಾಮ ಜನ್ಮಭೂಮಿ ಮತ್ತು ಬಾಬರಿ ಮಸೀದಿ ವಿವಾದದ ತೀರ್ಪು ನೀಡುವ ಸಂದರ್ಭದಲ್ಲಿ ಆಕ್ಟ್ 1993 ಅಥವಾ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಅಯೋಧ್ಯೆಯ ಯಾವುದೇ ಸೂಕ್ತ ಪ್ರಮುಖ ಸ್ಥಳದಲ್ಲಿ 5 ಎಕರೆ ಭೂಮಿಯನ್ನು ಮಂಜೂರು ಮಾಡಲು ಆದೇಶಿಸಲಾಗಿತ್ತು. ಅಲ್ಲದೇ ತೀರ್ಪಿನಲ್ಲಿ ನವೆಂಬರ್ 2019 ರಂದು ರಾಮಜನ್ಮಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು.

    MORE
    GALLERIES