Namaz in Road: ರಸ್ತೆಯಲ್ಲಿ ನಮಾಜ್ ಮಾಡಿದ 2000 ಜನರ ವಿರುದ್ಧ ಉತ್ತರ ಪ್ರದೇಶ ಪೊಲೀಸರಿಂದ ಎಫ್‌ಐಆರ್!

ಕಾನ್ಪುರ: ಈದ್‌ ಹಬ್ಬದ ವೇಳೆ ಅನುಮತಿ ಪಡೆಯದೆ ರಸ್ತೆಯಲ್ಲಿ ನಮಾಜ್ ಮಾಡಿದ ಕಾರಣಕ್ಕಾಗಿ ಉತ್ತರ ಪ್ರದೇಶ ಪೊಲೀಸರು 2000 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

First published:

  • 17

    Namaz in Road: ರಸ್ತೆಯಲ್ಲಿ ನಮಾಜ್ ಮಾಡಿದ 2000 ಜನರ ವಿರುದ್ಧ ಉತ್ತರ ಪ್ರದೇಶ ಪೊಲೀಸರಿಂದ ಎಫ್‌ಐಆರ್!

    ಘಟನೆಗೆ ಸಂಬಂಧಿಸಿದಂತೆ ಕಳೆದ ಬುಧವಾರ ಬಜಾರಿಯಾ, ಬಾಬು ಪೂರ್ವಾ ಮತ್ತು ಜಜ್ಮೌ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕವಾಗಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು, ಆದರೆ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

    MORE
    GALLERIES

  • 27

    Namaz in Road: ರಸ್ತೆಯಲ್ಲಿ ನಮಾಜ್ ಮಾಡಿದ 2000 ಜನರ ವಿರುದ್ಧ ಉತ್ತರ ಪ್ರದೇಶ ಪೊಲೀಸರಿಂದ ಎಫ್‌ಐಆರ್!

    ರಸ್ತೆಯಲ್ಲಿ ನಮಾಜ್ ಮಾಡಿರುವ ವಿಡಿಯೋಗಳನ್ನು ಸಂಗ್ರಹಿಸಿರುವ ಪೊಲೀಸರು, ವಿಡಿಯೋದಲ್ಲಿರುವ ವ್ಯಕ್ತಿಗಳನ್ನು ಗುರುತಿಸಿ ನಂತರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೆಸರು ಹೇಳಲಿಚ್ಚಿಸದ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

    MORE
    GALLERIES

  • 37

    Namaz in Road: ರಸ್ತೆಯಲ್ಲಿ ನಮಾಜ್ ಮಾಡಿದ 2000 ಜನರ ವಿರುದ್ಧ ಉತ್ತರ ಪ್ರದೇಶ ಪೊಲೀಸರಿಂದ ಎಫ್‌ಐಆರ್!

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಅಧಿಕಾರಿ, ‘ಕೆಲವು ಜನರು ನಮಾಜ್‌ಗೆ ತಡವಾಗಿ ಬಂದಿದ್ದರಿಂದ ಮತ್ತು ಆವರಣದಲ್ಲಿ ಸ್ಥಳಾವಕಾಶವಿಲ್ಲದ ಕಾರಣ ಈದ್ಗಾದ ಹೊರಭಾಗದ ರಸ್ತೆಯಲ್ಲಿ ನಮಾಜ್ ಮಾಡಿದ್ದಾರೆ’ ಎಂದು ಹೇಳಿದರು.

    MORE
    GALLERIES

  • 47

    Namaz in Road: ರಸ್ತೆಯಲ್ಲಿ ನಮಾಜ್ ಮಾಡಿದ 2000 ಜನರ ವಿರುದ್ಧ ಉತ್ತರ ಪ್ರದೇಶ ಪೊಲೀಸರಿಂದ ಎಫ್‌ಐಆರ್!

    ಹಿರಿಯ ಸಬ್ ಇನ್ಸ್‌ಪೆಕ್ಟರ್ (ಎಸ್‌ಎಸ್‌ಐ) ಓಂವೀರ್ ಸಿಂಗ್ ಅವರ ದೂರಿನ ಮೇರೆಗೆ ಈದ್ಗಾ ನಿರ್ವಹಣಾ ಸಮಿತಿಯ ಕೆಲವು ಸದಸ್ಯರು ಸೇರಿದಂತೆ 1,000-1,500 ಅಪರಿಚಿತ ವ್ಯಕ್ತಿಗಳ ವಿರುದ್ಧ ಬಜಾರಿಯಾ ಪೊಲೀಸ್ ಠಾಣೆಯಲ್ಲಿ ಒಂದನ್ನು ದಾಖಲಿಸಲಾಗಿದೆ.

    MORE
    GALLERIES

  • 57

    Namaz in Road: ರಸ್ತೆಯಲ್ಲಿ ನಮಾಜ್ ಮಾಡಿದ 2000 ಜನರ ವಿರುದ್ಧ ಉತ್ತರ ಪ್ರದೇಶ ಪೊಲೀಸರಿಂದ ಎಫ್‌ಐಆರ್!

    ಈದ್ಗಾ ನಿರ್ವಹಣಾ ಸಮಿತಿಯ ಕೆಲವು ಸದಸ್ಯರ ಜೊತೆಗೆ 1000-1500 ಮಂದಿ ಅಪರಿಚಿತರ ವಿರುದ್ಧ ಸಬ್‌ ಇನ್ಸ್‌ಪೆಕ್ಟರ್‌ ಓಂವೀರ್ ಸಿಂಗ್ ಅವರು ನೀಡಿದ್ದ ಸೂಚನೆಯ ಪ್ರಕಾರ ಬಜಾರಿಯಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

    MORE
    GALLERIES

  • 67

    Namaz in Road: ರಸ್ತೆಯಲ್ಲಿ ನಮಾಜ್ ಮಾಡಿದ 2000 ಜನರ ವಿರುದ್ಧ ಉತ್ತರ ಪ್ರದೇಶ ಪೊಲೀಸರಿಂದ ಎಫ್‌ಐಆರ್!

    ಇನ್ನು ಸುಮಾರು 300 ಜನರ ವಿರುದ್ಧ ಜಜ್ಮೌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದರೆ, ಬಾಬು ಪುರ್ವಾ ಪೊಲೀಸ್ ಠಾಣೆಯಲ್ಲಿ ದಾಖಲಾದ 3ನೇ ಎಫ್‌ಐಆರ್‌ನಲ್ಲಿ 50ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

    MORE
    GALLERIES

  • 77

    Namaz in Road: ರಸ್ತೆಯಲ್ಲಿ ನಮಾಜ್ ಮಾಡಿದ 2000 ಜನರ ವಿರುದ್ಧ ಉತ್ತರ ಪ್ರದೇಶ ಪೊಲೀಸರಿಂದ ಎಫ್‌ಐಆರ್!

    ಇದರ ಬೆನ್ನಲ್ಲೇ ಶಾಂತಿ ಸಮಿತಿಯ ಜೊತೆ ಪೊಲೀಸರು ಸಭೆ ನಡೆಸಿದ್ದು, ಈದ್ಗಾದಲ್ಲಿ ನಮಾಜ್ ಅಥವಾ ಪ್ರಾರ್ಥನೆ ಸಲ್ಲಿಸುವ ಬಗ್ಗೆ ಕೆಲವೊಂದು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವುದರ ಜೊತೆಗೆ ರಸ್ತೆಯಲ್ಲಿ ನಮಾಜ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    MORE
    GALLERIES