ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸ್ ಕಾನ್ಸ್‌ಟೇಬಲ್ ಮತ್ತು ಆತನ ಸಹೋದರನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
2/ 7
ಆರೋಪಿ ಕಾನ್ಸ್‌ಟೇಬಲ್‌ಗೆ ಮಹಿಳೆ ಪರಿಚಯ ಆದಾಗಿನಿಂದ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಅನೇಕ ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ.
3/ 7
ಪೊಲೀಸ್ ಕಾನ್ಸ್‌ಟೇಬಲ್ ಮಾತ್ರವಲ್ಲದೇ ಆತನ ಸಹೋದರ ಕೂಡ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದು, ಸದ್ಯ ಸಂತ್ರಸ್ತ ಮಹಿಳೆ ಇಬ್ಬರ ಮೇಲೂ ಪೊಲೀಸರಿಗೆ ದೂರು ನೀಡಿದ್ದಾರೆ.
4/ 7
ಸುಮಾರು ಆರು ತಿಂಗಳ ಹಿಂದೆ ಆರೋಪಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೆ, ಆದರೆ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ.
5/ 7
ಆದರೆ, ಕಳೆದ ಜನವರಿ 25 ರಂದು ಆರೋಪಿ ಕಾನ್‌ಸ್ಟೆಬಲ್ ತಮ್ಮ ವಿವಾಹದ ಬಗ್ಗೆ ಪೊಲೀಸರಿಗೆ ಅಫಿಡವಿಟ್ ನೀಡುವಂತೆ ಮಾಡಿದ್ದಾನೆ. ಇದಾದ ಬಳಿಕ ಆಕೆಯನ್ನು ತನ್ನ ಅಣ್ಣನ ನಿವಾಸಕ್ಕೆ ಕರೆದುಕೊಂಡು ಹೋಗಿದ್ದಾನೆ.
6/ 7
ಈ ವೇಳೆ ಆರೋಪಿ ಕಾನ್ಸ್‌ಟೇಬಲ್ ಮತ್ತು ಆತನ ಸಹೋದರ ಇಬ್ಬರೂ ಬಂದೂಕು ತೋರಿಸಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ.
7/ 7
ಆರೋಪಿಗಳು ತನ್ನನ್ನು ಬೇರೆ ಬೇರೆ ಹೋಟೆಲ್‌ಗಳಿಗೆ ಕರೆದೊಯ್ದು ತನ್ನ ಮೇಲೆ ಅತ್ಯಾಚಾರ ಎಸಗಿದ ನಂತರ ಎರಡು ಬಾರಿ ಗರ್ಭಿಣಿಯಾಗಿದ್ದೆ ಎಂದೂ ಮಹಿಳೆ ಹೇಳಿಕೊಂಡಿದ್ದಾರೆ.
First published:
17
Crime News: ಮದುವೆಯಾಗುತ್ತೇನೆಂದು ನಂಬಿಸಿ ಸಾಮೂಹಿಕ ಅತ್ಯಾಚಾರ; ಪೊಲೀಸ್ ಪೇದೆ ಸೇರಿ ಇಬ್ಬರ ವಿರುದ್ಧ ಎಫ್ಐಆರ್