Tejashwi Yadav: ಬಿಹಾರ ಡಿಸಿಎಂ ತೇಜಸ್ವಿ ಯಾದವ್‌ಗೆ ಬಿಗ್ ಶಾಕ್, ಜಾಮೀನು ರದ್ದುಗೊಳಿಸುವಂತೆ ಸಿಬಿಐ ಆಗ್ರಹ!

ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ಸಿಬಿಐ ಕುಣಿಕೆ ಬಿಗಿಗೊಳಿಸಿದೆ. IRCTC ಟೆಂಡರ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದೆಹಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ಈ ಪ್ರಕರಣದಲ್ಲಿ ತೇಜಸ್ವಿ ಯಾದವ್‌ಗೆ ನೀಡಿರುವ ಜಾಮೀನನ್ನು ರದ್ದುಗೊಳಿಸಬೇಕು ಎಂದು ತನಿಖಾ ಸಂಸ್ಥೆ ನ್ಯಾಯಾಲಯವನ್ನು ಒತ್ತಾಯಿಸಿದೆ. 2018 ರಲ್ಲಿ, ಐಆರ್‌ಸಿಟಿಸಿ ಟೆಂಡರ್ ಹಗರಣ ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಮಾಜಿ ಸಿಎಂ ರಾಬ್ರಿ ದೇವಿ, ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಸೇರಿದಂತೆ 14 ಜನರ ವಿರುದ್ಧ ತನಿಖಾ ಸಂಸ್ಥೆ ಚಾರ್ಜ್‌ಶೀಟ್ ಸಲ್ಲಿಸಿತ್ತು.

First published: