ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡ ನಂತರ ಅಫ್ಘಾನ್ನಲ್ಲಿ ದೊಡ್ಡ ಮಟ್ಟದ ಹಣಕಾಸಿನ ಕೊರತೆ ಉಂಟಾಗಿದೆ. ಅಫ್ಘಾನ್ನಲ್ಲಿ ಹಣದ ಓಡಾಟ ಕಡಿಮೆಯಾಗಿರುವ ಪರಿಣಾಮ ಎಲ್ಲಾ ವಸ್ತುಗಳ ಬೆಲೆಯೂ ಗಗನಕ್ಕೇರಿದೆ. ಹೀಗಾಗಿ ಅಫ್ಘಾನಿಸ್ತಾನ ಬ್ಯಾಂಕ್ (ಸೆಂಟ್ರಲ್ ಬ್ಯಾಂಕ್ ಆಫ್ ಅಫ್ಘಾನಿಸ್ತಾನ) ದೇಶದ ಹಣದ ಚಲಾವಣೆಗೆ ಹೊಸ ನೋಟುಗಳನ್ನು ಮುದ್ರಿಸಲು ಮುಂದಾಗಿದೆ.